ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಶಾಲೆಯ ಹಾಳಾದ ಕಟ್ಟಡ ವೀಕ್ಷಣೆ

Published 20 ಮಾರ್ಚ್ 2024, 5:44 IST
Last Updated 20 ಮಾರ್ಚ್ 2024, 5:44 IST
ಅಕ್ಷರ ಗಾತ್ರ

ತುಮಕೂರು: ನಗರದ ಕೋಟೆ ಆಂಜನೇಯ ಸ್ವಾಮಿ ದೇಗುಲದ ಮುಂಭಾಗದಲ್ಲಿರುವ ಎಂಪ್ರೆಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಭೇಟಿ ನೀಡಿ, ಶಾಲೆಯ ಹಾಳಾಗಿರುವ ಕಟ್ಟಡ ವೀಕ್ಷಿಸಿದರು.

160 ವರ್ಷಗಳ ಹಿಂದೆ ನಿರ್ಮಿಸಿದ್ದ ಶಾಲೆಯ ಕೊಠಡಿಗಳು ಸಂಪೂರ್ಣವಾಗಿ ಹಾಳಾಗಿವೆ. ಸರಿಯಾದ ಕಾಂಪೌಂಡ್‌ ಇಲ್ಲದೆ ಶಾಲೆಯ ಆವರಣ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಆವರಣದಲ್ಲಿಯೇ ಕಸ ತುಂಬಿಕೊಂಡಿದೆ. ಮುರಿದು ಹೋಗಿರುವ ಬಾಗಿಲು, ಕಿಟಕಿಗಳನ್ನು ವೀಕ್ಷಣೆ ಮಾಡಿದರು.

ನಗರದ ಹೃದಯ ಭಾಗದಲ್ಲಿರುವ ಶತಮಾನ ಕಂಡ ಶಾಲೆಯ ಬಗ್ಗೆ ಜಿಲ್ಲಾ ಆಡಳಿತ ನಿರ್ಲಕ್ಷ ವಹಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಶಾಲೆಯ ಬಗ್ಗೆ ದೂರು ದಾಖಲಾಗಿದ್ದು, ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಶೀಘ್ರದಲ್ಲಿಯೇ ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡುವಂತೆ’ ಮಕ್ಕಳ ಹಕ್ಕುಗಳ ಆಯೋಗದ ಕಾನೂನು ಕೋಶದ ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆಗೆ ಒಂದು ಶತಮಾನಕ್ಕೂ ಹೆಚ್ಚಿನ ಇತಿಹಾಸ ಇದೆ. ಒಂದು ಪಾರಂಪರಿಕ ತಾಣವಾಗಿ ಅಭಿವೃದ್ಧಿಗೊಳಿಸಬೇಕಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಒಳಗಾಗಿರುವುದು ವಿಪರ್ಯಾಸ ಎಂದರು.

ಶಾಲೆ ಕಟ್ಟಡ ಶಿಥಿಲಾವಸ್ಥೆ ತಲುಪಿದ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT