ಸೋಮವಾರ, ಡಿಸೆಂಬರ್ 6, 2021
27 °C

ಕನ್ನಡ ನಾಮಫಲಕ ಅಳವಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ನಾಮಫಲಕ ತೆಗೆದು ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಕನ್ನಡ ಜಾಗೃತಿ ವೇದಿಕೆ ಪದಾಧಿಕಾರಿಗಳು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ರೇವಣಸಿದ್ದಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ತಾಲ್ಲೂಕು ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ರಾಘವೇಂದ್ರ ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿಡಿಪಿಐ ರೇವಣಸಿದ್ದಪ್ಪ, ಇಂಗ್ಲಿಷ್ ನಾಮಫಲಕ ಹಾಕಿದ ಶಾಲೆಗಳಿಗೆ ನೋಟಿಸ್ ನೀಡಲಾಗುವುದು ಎಂದರು.

ಕನ್ನಡ ಜಾಗೃತಿ ವೇದಿಕೆ ಸಂಘಟನೆ ಕಾರ್ಯದರ್ಶಿ ಶಿವಲಿಂಗಪ್ಪ, ನಗರ ಕಾರ್ಯದರ್ಶಿ ರೋಹಿತ್, ಕೊಡಿಗೇನಹಳ್ಳಿ ಹೋಬಳಿ ಅಧ್ಯಕ್ಷ ರಾಜು, ನರಸಿಂಹಮೂರ್ತಿ, ನಾಗರಾಜ್, ಚೌಡಪ್ಪ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.