ಸೋಮವಾರ, ಜುಲೈ 26, 2021
22 °C

ರೈಲು ನಿಲ್ದಾಣದಲ್ಲಿ ಲಿಫ್ಟ್‌ ಅಳವಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ತುಮಕೂರು ರೈಲು ನಿಲ್ದಾಣದಲ್ಲಿ ಅಳವಡಿಸಿರುವ ಲಿಫ್ಟ್‌ ಅನ್ನು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಔಪಚಾರಿಕವಾಗಿ ಇತ್ತೀಚೆಗೆ ಉದ್ಘಾಟಿಸಿದರು. ನಿಲ್ದಾಣದ ಒಂದು, ಎರಡು ಮತ್ತು ಮೂರನೇ ಪ್ಲಾಟ್‌ಫಾರಂಗಳಲ್ಲಿ ಈ ಲಿಫ್ಟ್‌  ಅಳವಡಿಸಲಾಗಿದೆ.

ರೈಲು ನಿಲ್ದಾಣದಲ್ಲಿ ಕೇವಲ ಒಂದು ಪ್ರಯಾಣಿಕರ ಮೇಲ್ಸೇತುವೆ ನಿರ್ಮಿಸಲಾಗಿತ್ತು. ಅಲ್ಲದೆ, ಇದಕ್ಕೆ ರ‍್ಯಾಂಪ್ ಅಳವಡಿಸಿರಲಿಲ್ಲ. ಇದರಿಂದ ವೃದ್ಧರು, ಮಹಿಳೆಯರು, ಅಶಕ್ತರು, ಗರ್ಭಿಣಿಯರು ಹಾಗೂ ಅಂಗವಿಕಲರು ಸಂಚರಿಸಲು ತೊಂದರೆ ಆಗುತ್ತಿತ್ತು. ಇದೀಗ ಎಸ್ಕಲೇಟರ್ ಅಳವಡಿಕೆಯಿಂದ ಎಲ್ಲ ಪ್ರಯಾಣಿಕರಿಗೆ ಅನುಕೂಲವಾಗಿದೆ.

ನೈಋತ್ಯ ರೈಲ್ವೆ ವಲಯದ ಪ್ರಯಾಣಿಕರ ಸಲಹಾ ಸಮಿತಿ ಸದಸ್ಯರಾದ ಕರಣಂ ರಮೇಶ್ ಮತ್ತು ರಘೋತ್ತಮ ರಾವ್, ರ‍್ಯಾಂಪ್ ನಿರ್ಮಿಸಲು ಸಾಧ್ಯವಿಲ್ಲದ ಕಾರಣ ಲಿಫ್ಟ್‌ ಅಳವಡಿಸಬೇಕು ಎಂದು ಮನವಿ ಮಾಡಿದ್ದರು. ಹಿಂದಿನ ಸಂಸದ ಎಸ್.ಪಿ.ಮುದ್ದಹನುಮೇಗೌಡ ಹಾಗೂ ಹಾಲಿ ಸಂಸದ ಜಿ.ಎಸ್.ಬಸವರಾಜು ಅವರಿಗೂ ಲಿಫ್ಟ್‌ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

ಬೆಂಚ್ ಅಳವಡಿಕೆ:  ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಕ್ತ ಆಸನಗಳ ವ್ಯವಸ್ಥೆ ಇಲ್ಲದ ಕಾರಣ ಕುಳಿತುಕೊಳ್ಳಲು ಆಸನಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಸ್ಟೇನ್‌ಲೆಸ್ ಸ್ಟೀಲ್‌ನ ಎರಡು ಬಗೆಯ ಮೂರು ಆಸನಗಳ 35 ಬೆಂಚುಗಳು ಬಂದಿವೆ. ಇನ್ನೂ 50 ಬೆಂಚುಗಳು ಬರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು