ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತರಿಗೆ ಆತ್ಮವಿಶ್ವಾಸ ತುಂಬಿ

Last Updated 4 ಅಕ್ಟೋಬರ್ 2020, 16:39 IST
ಅಕ್ಷರ ಗಾತ್ರ

ತುಮಕೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಜೊತೆಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದರೆ ಹೆಚ್ಚು ಉಪಯೋಗವಾಗಲಿದೆ ಎಂದು ತಿಪಟೂರು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಟಿ.ವಿ.ಈಶ್ವರಯ್ಯ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿ ಸಂಘದ ಜಿಲ್ಲಾ ಘಟಕ ಡಾ.ಟಿ.ವಿ.ಈಶ್ವರಯ್ಯ ಅವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಕೊರೊನಾ ರೋಗ ಬಂದರೆ ಯಮಯಾತನೆ ಎನ್ನುವ ಚಿತ್ರಗಳು ಕಂಡು ಬರುತ್ತಿವೆ. ಅಷ್ಟು ಗಾಬರಿ ಪಡುವ ಅಗತ್ಯವಿಲ್ಲ. ರೋಗಿಯೊಂದಿಗೆ ಆಪ್ತ ಸಮಾಲೋಚನೆ ನಡೆಸಿದರೆ ರೋಗದ ಮೂಲ ಕಂಡುಕೊಳ್ಳಲು ಸಾಧ್ಯ ಎಂದರು.

ಜಿಲ್ಲೆಯಲ್ಲಿ ಮಕ್ಕಳ ತಜ್ಞ, ಆಡಳಿತಾಧಿಕಾರಿಯಾಗಿ, ಬರಹಗಾರರನಾಗಿಯೂ ಕೆಲಸ ಮಾಡಿದ್ದೇನೆ. ವೃತ್ತಿ ಜೀವನ ತೃಪ್ತಿ ತಂದಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಆರ್.ರಾಜಶೇಖರಯ್ಯ ಮಾತನಾಡಿದರು.

ಜಿಲ್ಲಾ ತರಬೇತಿ ಕೇಂದ್ರದ ನಿರ್ದೇಶಕಿ ಡಾ.ರಜಿನಿ, ಡಾ.ಮೋಹನ್, ಡಾ.ಮಂಜುನಾಥ್, ಡಾ.ಕೇಶವರಾಜ್, ಡಾ.ಸನತ್, ಡಾ.ಮಂಜುನಾಥ್, ಡಾ.ಮೋಹನ್, ಡಾ.ಸವಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT