ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಬ್ಬಿ | ಮೀಟರ್ ಬಡ್ಡಿ ಕಿರುಕುಳ: ಬೇಕರಿ ಮಾಲೀಕ ಆತ್ಮಹತ್ಯೆ

Published : 6 ಸೆಪ್ಟೆಂಬರ್ 2024, 5:11 IST
Last Updated : 6 ಸೆಪ್ಟೆಂಬರ್ 2024, 5:11 IST
ಫಾಲೋ ಮಾಡಿ
Comments

ಗುಬ್ಬಿ: ಪಟ್ಟಣದ ಹೊರವಲಯದ ಸಿಐಟಿ ಕಾಲೇಜು ಮುಂಭಾಗದ ಬೇಕರಿಯಲ್ಲಿ ಗುರುವಾರ ರಾತ್ರಿ ಬೇಕರಿ ಮಾಲೀಕ ರಾಜು (45) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಟ್ಟಣದ ಬಡ್ಡಿ ನಾಗ ಎಂಬುವರಿಂದ ಪಡೆದಿದ್ದ ಸಾಲ ಹಿಂದಿರುಗಿಸಿದ್ದರೂ, ಚೆಕ್ ವಾಪಸ್ ನೀಡದೆ ಮತ್ತಷ್ಟು ಹಣಕ್ಕಾಗಿ ಪೀಡಿಸಿ ಹಿಂಸೆ ನೀಡುತ್ತಿದ್ದ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ರಾಜು ಹೇಳಿರುವ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.

ಗುಬ್ಬಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

'ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಬೀಳುತ್ತಿಲ್ಲ. ಇದರಿಂದಾಗಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾ ಆಡಳಿತ ಹಾಗೂ ಪೊಲೀಸರು ಮೀಟರ್ ಬಡ್ಡಿ ವಸೂಲಿ ಮಾಡುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT