ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

Last Updated 17 ಸೆಪ್ಟೆಂಬರ್ 2020, 5:56 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿಗಳ ವತಿಯಿಂದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮ ಸೋಮವಾರ ನೆರವೇರಿತು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಧ್ವಜರೋಹಣ ನೆರವೇರಿಸಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕೆ.ಬಾಲಾಜಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಪಂಚವನ್ನು ಕಾಡುತ್ತಿರುವ ಅನಕ್ಷರತೆ ಹೋಗಲಾಡಿಸಲು ಜಗತ್ತಿನ 144 ರಾಷ್ಟ್ರಗಳು ಸೇರಿ ಸೆ. 7ರಿಂದ 14ರ ವರೆಗೆ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಮಾಜದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ವರ್ಗವನ್ನು ಮೇಲೆತ್ತುವ ಕಾರ್ಯವನ್ನು ಲೋಕ ಶಿಕ್ಷಣ ಸಮಿತಿಯು ನಡೆಸಿಕೊಂಡು ಬರುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿರುವ ವಯಸ್ಕ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿಮಾಡಿ ಸಮಾಜದ ಮುಖ್ಯವಾಹಿನಿಗೆ ಕರೆತರುವಂತಹ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಜಿ.ಪಂ ಮುಖ್ಯ ಯೋಜನಾ ಅಧಿಕಾರಿ ಬಾಲರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಬಂಡಿವೀರಪ್ಪ, ಜಿಲ್ಲಾ ಲೋಕಶಿಕ್ಷಣ ಸಮಿತಿ ಸದಸ್ಯ ಅನ್ನಪೂರ್ಣ ವೆಂಕಟನಂಜಪ್ಪ, ಗಂಗಾಧರ್, ಮಧುಗಿರಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಚ್.ಚಂದ್ರಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT