ಮಧುಗಿರಿ: ಮನುಷ್ಯ ದೀರ್ಘಾಯುಷಿ ಆಗಿರಲು ನಿತ್ಯ ಯೋಗಾಭ್ಯಾಸ ಅಳವಡಿಸಿಕೊಳ್ಳಬೇಕು ಎಂದು ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಆಯೋಜಿಸಿದ್ದ ಯೋಗ ದಿನಾಚರಣೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಧುನಿಕ ಜೀವನ ಪದ್ಧತಿಯಲ್ಲಿ ಒತ್ತಡ ಹಾಗೂ ಆಹಾರ ಪದ್ಧತಿಯಿಂದಾಗಿ ದೇಹ ಸದೃಢವಾಗಿರಲು ಸಾಧ್ಯವಾಗುತ್ತಿಲ್ಲ. ಪೂರ್ಣ ಆಯಸ್ಸು ಪಡೆಯಬೇಕಾದರೆ ಯೋಗಕ್ಕೆ ಆಧ್ಯತೆ ನೀಡಬೇಕು ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಮಾತನಾಡಿ, ಭಾರತವು ವಿಶ್ವಕ್ಕೆ ಯೋಗದ ಮೂಲಕ ಶಾಂತಿಯನ್ನು ರಫ್ತು ಮಾಡಿದೆ. ಜೀವನದಲ್ಲಿ ಯೋಗವನ್ನು ಅಳಪಡಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಪತಂಜಲಿ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ವಿ. ಮಂಜುನಾಥ ಗುಪ್ತ, ಖಜಾಂಚಿ ಡಾ.ಜಿ.ಕೆ.ಜಯರಾಂ, ಮಧುಗಿರಿ ಶಾಖೆ ಸಂಚಾಲಕ ಎಂ.ಎನ್. ನರಸಿಂಹಮೂರ್ತಿ, ಯೋಗ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.