ತುಮಕೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಮೂಹಿಕ ಯೋಗಾಭ್ಯಾಸ ನಡೆಯಿತು.
ತುಮಕೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಮೂಹಿಕ ಯೋಗಾಭ್ಯಾಸ ನಡೆಯಿತು.
ADVERTISEMENT
ADVERTISEMENT
ಜಿಲ್ಲಾ ಆಡಳಿತ, ಆಯುಷ್ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾರ್ವಜನಿಕರು, ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು ಯೋಗಾಸನ ಮಾಡಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಯೋಗಾಭ್ಯಾಸಕ್ಕೆ ಚಾಲನೆ ನೀಡಿ ಮಾತನಾಡಿ, ಬದುಕಿನ ಒತ್ತಡ ನಿವಾರಣೆಗೆ ಯೋಗ ಸಹಕಾರಿಯಾಗಲಿದೆ. ನಮ್ಮ ಕನಸು ನನಸಾಗಬೇಕಾದರೆ ದೃಢವಾದ ದೇಹ ಇರಬೇಕು. ಹೀಗಾಗಿ ಎಲ್ಲರು ಯೋಗಾಭ್ಯಾಸ ಮಾಡಬೇಕು. ನಮ್ಮ ದೇಶದಲ್ಲಿ ಸುಮಾರು ವರ್ಷಗಳಿಂದ ಯೋಗಾಭ್ಯಾಸ ಮಾಡಲಾಗುತ್ತಿದೆ ಎಂದರು.
ಪ್ರತಿ ಹಳ್ಳಿಯಲ್ಲಿ ಯೋಗದ ಕುರಿತು ಪ್ರಚಾರ ಆಗಬೇಕು ಎಂಬ ಉದ್ದೇಶದಿಂದ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತದೆ. ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸುವ ಗುರಿ ಇದೆ. ಪ್ರತಿಯೊಬ್ಬರು ಕನಿಷ್ಠ ಅರ್ಧ ಗಂಟೆಯಾದರೂ ಯೋಗಾಭ್ಯಾಸ ಮಾಡಿದರೆ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.
ADVERTISEMENT
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಡಿಎಚ್ಒ ಡಾ.ಬಿ.ಎಂ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ಇತರರು ಭಾಗವಹಿಸಿದ್ದರು.