ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಮೇಡಿ ಗ್ರಾಮ ಪಂಚಾಯಿತಿಗೆ ತನಿಖಾ ತಂಡ ಭೇಟಿ

Published 12 ಮಾರ್ಚ್ 2024, 3:03 IST
Last Updated 12 ಮಾರ್ಚ್ 2024, 3:03 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ಕನ್ನಮೇಡಿ ಗ್ರಾಮ ಪಂಚಾಯಿತಿ ಕಚೇರಿಗೆ ಸೋಮವಾರ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆಸಲಾದ ರಸ್ತೆ, ಚರಂಡಿ, ಗೋಕಟ್ಟೆ, ಶೌಚಾಲಯ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಚಿತ್ತಗಾನಹಳ್ಳಿ ಗ್ರಾಮಸ್ಥರು ದೂರು ನೀಡಿದ್ದರು.

ಗ್ರಾಮ ಪಂಚಾಯಿತಿಯಲ್ಲಿ ದಾಖಲೆಗಳನ್ನು ಸಂಗ್ರಹಿಸಿ ಚಿತ್ತಗಾನಹಳ್ಳಿ ಗ್ರಾಮಕ್ಕೆ ಆಗಮಿಸಿ ಕಾಮಗಾರಿ ನಡೆಸಲಾಗಿದೆ ಎನ್ನಲಾದ ಸ್ಥಳವನ್ನು ಪರಿಶೀಲಿಸಿತು.

ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ ಕೂಡಲೆ ಗ್ರಾಮಸ್ಥರ ಯಾವುದೇ ಕಾಮಗಾರಿ ನಡೆಸದೆ ಬಿಲ್ ಮಾಡಿಕೊಳ್ಳಲಾಗಿದೆ. ಕೆಲ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ತನಿಖಾಧಿಕಾರಿ ಡಾ.ವಿ.ಸಾಂಬಾಜಿರಾವ್ ಅವರು ಕಾಮಗಾರಿ ಮಾಡದೆ ಬಿಲ್ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಈ ಕೂಡಲೆ ಡ್ರಾ ಮಾಡಿಕೊಂಡಿರುವ ಬಿಲ್ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು. ಸಮರ್ಪಕವಾಗಿ ಕಾಮಗಾರಿ ಮಾಡಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಅವರಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಅವ್ಯವಹಾರ ನಡೆಯದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT