ಶನಿವಾರ, ಡಿಸೆಂಬರ್ 14, 2019
21 °C

ಲಕ್ಷಣ ಸವದಿಗೆ ಈಗ ಸಚಿವ ಸ್ಥಾನ ಕೊಟ್ಟಿದ್ದು ಸರಿಯಲ್ಲ: ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ‘ಲಕ್ಷ್ಮಣ ಸವದಿ ನನ್ನ ಸ್ನೇಹಿತರು. ಆದರೂ ಈಗ ಅವರು ಶಾಸಕರಲ್ಲದೇ ಇರುವುದರಿಂದ ಅವರಿಗೆ ಈ ಸಂದರ್ಭದಲ್ಲಿ ಸಚಿವ ಸ್ಥಾನ ಕೊಟ್ಟಿದ್ದು ಸರಿಯಲ್ಲ ಎಂಬ ನನ್ನ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಅದನ್ನು ಬಿಟ್ಟರೆ ಬೇರೆ ಉದ್ದೇಶವಿಲ್ಲ’ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಗುರುವಾರ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಸವದಿ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದರ ಬಗ್ಗೆ ನನ್ನ ಹಾಗೆಯೇ ಪಕ್ಷದ ಅನೇಕ ಶಾಸಕರಿಗೆ ಬೇಸರವಿದೆ. ಅದನ್ನು ನಾನು ಬಹಿರಂಗವಾಗಿ ಹೇಳಿದ್ದೇನೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಬುಧವಾರ ರಾತ್ರಿ ಈ ಅಂಶ ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದು ತಿಳಿಸಿದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು