ಬುಧವಾರ, ಮೇ 12, 2021
18 °C

ತುಮಕೂರು | ಐಟಿ ದಾಳಿ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕಾಂಗ್ರೆಸ್‌ ಮುಖಂಡ ಡಾ.ಜಿ.ಪರಮೇಶ್ವರ ಅವರ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ವ್ಯವಹಾರಕ್ಜೆ ಸಂಬಂಧಿಸಿದಂತೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿ ಖಂಡಿಸಿ ಶನಿವಾರ ಪರಮೇಶ್ವರ ಅವರ ಕ್ಷೇತ್ರ ಕೊರಟಗೆರೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು.

ಬಿಜೆಪಿ‌ ವಿರುದ್ಧ ಹರಿಹಾಯ್ದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ವಿರುದ್ಧ ದಿಕ್ಕಾರ ಕೂಗಿದರು.

* ಇದನ್ನೂ ಓದಿ: ಐಟಿ ದಾಳಿ | ಮಂಗಳವಾರ ವಿಚಾರಣೆಗೆ ಹಾಜರಾಗುವೆ, ಪ್ರತಿಭಟನೆ ಬೇಡ: ಪರಮೇಶ್ವರ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೆಡಿಕಲ್ ಅಶ್ವತ್, ಅರಕೆರೆ ಶಂಕರ್, ಮುಖಂಡರಾದ ಕೆ.ಆರ್.ಓಬಳರಾಜು, ಕೆ.ವಿ.ಮಂಜುನಾಥ್, ತುಂಬಾಡಿ ರಾಮಚಂದ್ರಪ್ಪ, ನರಸಿಂಹಪ್ಪ, ಜಿ. ವೆಂಕಟಚಲಯ್ಯ, ಅನಿಲ್ ಕುಮಾರ್ ಪಾಟೀಲ್ ಇತರರು ಇದ್ದರು.

* ಇದನ್ನೂ ಓದಿ: ಐ.ಟಿ ದಾಳಿ: ₹100 ಕೋಟಿ ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು