ಬುಧವಾರ, ಮೇ 12, 2021
27 °C

ತುಮಕೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ಗೂ ಐಟಿ ಶಾಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಾಸಕ ಡಾ.ಜಿ.ಪರಮೇಶ್ವರ್ ಒಡೆತನದ ಎಸ್ಎಸ್ಐಟಿ ಎಂಜಿನಿಯರಿಂಗ್ ಕಾಲೇಜು ಮೇಲೆ ಐಟಿ ಅಧಿಕಾರಿಗಳು ಗುರುವಾರ ಮುಂಜಾನೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಒಟ್ಟು ಹನ್ನೆರೆಡು ಅಧಿಕಾರಿಗಳಿದ್ದ ತಂಡ ದಾಳಿ ನಡೆಸಿದೆ.

ಬೆಳಿಗ್ಗೆ ಕೊರಟಗೆರೆ ತಾಲ್ಲೂಕು ಜಂಪೇನಹಳ್ಳಿ ಗ್ರಾಮದ ಕೆರೆಗೆ ಪರಮೇಶ್ವರ ಅವರು ಬಾಗಿನ ಅರ್ಪಿಸಲು ತೆರಳಿದ್ದರು.

ಅಲ್ಲಿಗೆ ತೆರಳಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಮೇಶ್ವರ ಅವರನ್ನು ವಿಚಾರಿಸಿದ್ದಾರೆ. ಬಳಿಕ ಕೊರಟಗೆರೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ಪರಮೇಶ್ವರ ಅವರಿಂದ ಮಾಹಿತಿ ಪಡೆದಿದ್ದಾರೆ.
ಹದಿನೈದು ನಿಮಿಷ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಪರಮೇಶ್ವರ ಬೆಂಗಳೂರಿಗೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ತೆರಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು