ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವೇಕೆರೆ: ಜಲಜೀವನ್ ಕಾಮಗಾರಿಗೆ ಚಾಲನೆ

Published 2 ಮಾರ್ಚ್ 2024, 14:14 IST
Last Updated 2 ಮಾರ್ಚ್ 2024, 14:14 IST
ಅಕ್ಷರ ಗಾತ್ರ

ತುರುವೇಕೆರೆ: ತಾಲ್ಲೂಕಿನ ಸಾದರಹಳ್ಳಿ ಮತ್ತು ಕೆರೆವರಗೇನಹಳ್ಳಿಯಲ್ಲಿ ಗ್ರಾಮದಲ್ಲಿ ಜಲಜೀವನ್ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.

ಸಾದರಹಳ್ಳಿಯಲ್ಲಿ ₹40 ಲಕ್ಷ ವೆಚ್ಚದಲ್ಲಿ 167 ಮನೆಗಳಿಗೆ, ಕೆರೆವರಗೇನಹಳ್ಳಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ 85 ಮನೆಗಳಿಗೆ ಕುಡಿಯುವ ನೀರು ಒದಗಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ನಂತರ ಮಾತನಾಡಿದ ಶಾಸಕರು, ಜನರಿಗೆ ನೀರಿನ ಬರ ತಪ್ಪಿಸುವ ಮತ್ತು ಮನೆ ಬಳಿಯೇ ನೀರು ದೊರೆಯುವಂತೆ ಮಾಡುವ ಯೋಜನೆಯಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸಾದರಹಳ್ಳಿ ದೊಡ್ಢೇಗೌಡ, ಸ್ಥಳೀಯರಾದ ಕಣತೂರು ತಿಮ್ಮೇಗೌಡ, ಮುದ್ದನಹಳ್ಳಿ ಲಕ್ಷಣ್ ಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ನಾಗಮಣಿ, ಅರುಣ್, ಪ್ರಭು, ಕೆರೆವರಗೇನಹಳ್ಳಿಯ ಪಟೇಲ್ ರಾಜು, ಗ್ರಾಮ ಪಂಚಾಯಿತಿ ಸದಸ್ಯ ಹನುಮೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT