ಶನಿವಾರ, ಮೇ 28, 2022
27 °C

ಕೆಸರುಗದ್ದೆಯಾದ ಜಾಲಿಹಳ್ಳಿ ರಸ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಡಿಗೇನಹಳ್ಳಿ: ಹೋಬಳಿಯ ಜಾಲಿಹಳ್ಳಿ ಗ್ರಾಮದ ರಸ್ತೆ ಇದುವರೆಗೂ ಡಾಂಬರು ಭಾಗ್ಯ ಕಂಡಿಲ್ಲ. ಇಲ್ಲಿ ಮಳೆ ಬಂತೆಂದರೆ ರಸ್ತೆ ಕೆಸರುಗದ್ದೆಯಂತಾಗಿದ್ದು, ಸಂಚರಿಸುವ ವಾಹನಗಳು ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಿ ಬೀಳುವುದುಂಟು. ಇದರಿಂದ ಈ ಭಾಗದ ಜನರು ನರಕಯಾತನೆ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ಗ್ರಾಮೀಣ ಭಾಗದ ಕೆಲವು ಹಳ್ಳಿಯ ರಸ್ತೆಗಳು ಇನ್ನು ಡಾಂಬರು ಕಾಣದಿರುವುದು ನಮ್ಮ ದೌರ್ಭಾಗ್ಯ. ಈ ರಸ್ತೆ ಅಭಿವೃದ್ಧಿಪಡಿಸಲೆಂದು ಕ್ಷೇತ್ರದ ಶಾಸಕರಿಗೆ ಮತ್ತು ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ಮನವಿ ಮಾಡಿದರೂ ಅಭಿವೃದ್ಧಿ ಕಂಡಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ನಿಮ್ಮ ರಸ್ತೆಯನ್ನು ಶೀಘ್ರವೇ ಅಭಿವೃದ್ಧಿಪಡಿಸುತ್ತೇವೆ ಎನ್ನುತ್ತಾರೆ. ಆದರೆ, ಇಂದಿಗೂ ಕ್ರಮವಹಿಸಿಲ್ಲ ಎಂದು ದೂರುತ್ತಾರೆ.

‘ಜನಪ್ರತಿನಿಧಿಗಳು ಗೆದ್ದ ನಂತರ ಅವರು ಈ ಕಡೆಗೆ ತಿರುಗಿಯೂ ನೋಡಲ್ಲ. ಕೇವಲ ಒಂದೂವರೆ ಕಿಲೋಮೀಟರ್ ಅಂತರವಿರುವ ಈ ರಸ್ತೆಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ಬಿದ್ದಿರುವುದರಿಂದ ಜೋರಾದ ಮಳೆ ಅಥವಾ ಸೋನೆ ಮಳೆ ಬಂತೆಂದರೆ ರಸ್ತೆ ಕೆಸರುಗದ್ದೆಯಂತಾಗುತ್ತದೆ. ಇದರಿಂದ ವಾಹನ ಸವಾರರು, ಮಹಿಳೆಯರು, ವೃದ್ಧರು ಮತ್ತು ವಿದ್ಯಾರ್ಥಿಗಳು ಯಮಯಾತನೆ ಅನುಭವಿಸುತ್ತಾರೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯವರು ರಸ್ತೆ ಅಭಿವೃದ್ಧಿಪಡಿಸಲು ಮುಂದಾಗಬೇಕು’ ಎಂಬುದು ಜಾಲಿಹಳ್ಳಿ ಗ್ರಾಮಸ್ಥರ ಆಗ್ರಹ.‌

‘ಈ ವಿಚಾರ ಈಗ ನನ್ನ ಗಮನಕ್ಕೆ ಬಂದಿದೆ. ಈ ಬಾರಿ ಯಾವುದಾದರೂ ಅನುದಾನದಲ್ಲಿ ಜಾಲಿಹಳ್ಳಿ ರಸ್ತೆಗೆ ಮೊದಲ ಆದ್ಯತೆ ನೀಡಿ ಅಭಿವೃದ್ಧಿಪಡಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಎಇಇ ಸುರೇಶ್ ರೆಡ್ಡಿ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು