ತುಮಕೂರು: ರಾಜ್ಯದಲ್ಲಿ ಜನೌಷಧಿ ಕೇಂದ್ರ ಮುಚ್ಚುತ್ತಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡರು ಕಪ್ಪು ಪಟ್ಟಿ ಧರಿಸಿ ನಗರದ ಜಿಲ್ಲಾ ಆಸ್ಪತ್ರೆ ಎದುರು ಶುಕ್ರವಾರ ಧರಣಿ ನಡೆಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ, ಆರೋಗ್ಯ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜನೌಷಧಿ ಕೇಂದ್ರಗಳನ್ನು ಮುಚ್ಚುವುದನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿದರು.

ಶಾಸಕ ಬಿ.ಸುರೇಶ್ಗೌಡ, ‘ಬಡವರಿಗೆ ಅತ್ಯಂತ ಕಡಿಮೆ ಬೆಲೆಗೆ ಗುಣಮಟ್ಟದ ಔಷಧಗಳು ಜನೌಷಧಿ ಕೇಂದ್ರಗಳಲ್ಲಿ ಸಿಗುತ್ತಿವೆ. ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗುತಿತ್ತು. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಜನೌಷಧಿ ಕೇಂದ್ರ ಮುಚ್ಚುವ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.

ಆರೋಗ್ಯ ಸೇವೆ ದುಬಾರಿಯಾಗಿದ್ದು, ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಔಷಧ ದೊರಕಿಸುವ ಸಲುವಾಗಿ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿತ್ತು. ಇವುಗಳನ್ನು ಮುಚ್ಚಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಬಡ ಜನರ ವಿರೋಧಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಅವರ ಜನಪರ ಯೋಜನೆಗಳನ್ನು ದ್ವೇಷಮಾಡಿ ರದ್ದುಪಡಿಸುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಬಡಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲವಾಗಿದೆ ಎಂದು ಆರೋಪಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ರಾಜ್ಯ ವಕ್ತಾರ ಎಚ್.ಎನ್.ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ಗೌಡ, ಮುಖಂಡರಾದ ಧನುಷ್, ಟಿ.ಎಚ್.ಹನುಮಂತರಾಜು, ಎಚ್.ಎಂ.ರವೀಶಯ್ಯ, ಟಿ.ಆರ್.ಸದಾಶಿವಯ್ಯ, ಸತ್ಯಮಂಗಲ ಜಗದೀಶ್, ವಿರೂಪಾಕ್ಷಪ್ಪ, ಪುಟ್ಟರಾಜು, ಬಂಬೂ ಮೋಹನ್, ಗಣೇಶ್ ಪ್ರಸಾದ್, ಬನಶಂಕರಿಬಾಬು, ಮನೋಹರಗೌಡ, ಹನುಮಂತರಾಯಪ್ಪ, ಆಟೊ ಶಿವಕುಮಾರ್, ನಿಸರ್ಗರಮೇಶ್, ರಾಜಶೇಖರ್, ಗಂಗಾಧರ್, ವೆಂಕಟೇಶಾಚಾರ್, ಮಂಜುನಾಥ್, ಪ್ರತಾಪ್, ಹನುಮಂತರಾಜು, ಗಂಗೇಶ್, ಎಚ್.ಶಂಕರಪ್ಪ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.