ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಗ್ರೀವಾಜ್ಞೆ ರದ್ದತಿಗೆ ಆಗ್ರಹಿಸಿ ಜಾಥಾ

Last Updated 18 ಸೆಪ್ಟೆಂಬರ್ 2020, 2:58 IST
ಅಕ್ಷರ ಗಾತ್ರ

ಪಾವಗಡ: ರೈತ, ದಲಿತ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ರದ್ದುಪಡಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಪದಾಧಿಕಾರಿ ಕೆ.ಮರಿಯಪ್ಪ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ನಡೆದ ಜನಜಾಗೃತಿ ಜಾಥಾದಲ್ಲಿ ಮಾತನಾಡಿದರು.

ಕಲ್ಲಹಳ್ಳಿಯ ದೇವರಾಜು ಅರಸು ಸಾಮಾಧಿಯಿಂದ ಜನಜಾಗೃತಿ ಜಾಥಾ ಆರಂಭಿಸಲಾಗಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ದಲಿತ, ರೈತ, ಬಡ ಜನ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಸರ್ಕಾರ ಜಾರಿಗೊಳಿಸತ್ತಿರುವುದು ಖಂಡನೀಯ. ಇಂತಹ ಕಾಯ್ದೆಗಳ ತಿದ್ದುಪಡಿಯಿಂದ ಜನ ಜೀವನ ಅಸ್ತವ್ಯಸ್ತಗೊಳ್ಳಲಿದೆ. ಈ ಬಗ್ಗೆ ರಾಜ್ಯದಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸೆ. 21ರಿಂದ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳೊಂದಿಗೆ ಜನ ವಿರೋಧಿ ಸುಗ್ರೀವಾಜ್ಞೆಗಳ ರದ್ದತಿಗಾಗಿ ಹಾಗೂ ಭೂಮಿ ವಸತಿ ಹಕ್ಕಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲಾಗುವುದು ಎಂದರು.

ಮುಖಂಡ ಕೋರ್ಟ್ ನರಸಪ್ಪ, ತಳ ಸಮುದಾಯಗಳು, ಬಡ ಜನತೆ ಭೂಮಿಯಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಇಂತಹ ಕ್ಲಿಷ್ಟ ಸ್ಥಿತಿಯಲ್ಲಿಯೂ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿರುವುದು ವಿಷಾದನೀಯ. ಬೆಂಗಳೂರಿನಲ್ಲಿ ನಡೆಯಲಿರುವ ಸತ್ಯಾಗ್ರಹಕ್ಕೆ ಜನರ ಸಹಕಾರ ನೀಡಬೇಕು ಎಂದು ಹೇಳಿದರು.

ಪಟ್ಟಣದಾದ್ಯಂತ ಕರಪತ್ರಗಳನ್ನು ವಿತರಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಹೋರಾಟ ಸಮಿತಿ ಕಾರ್ಯಕರ್ತೆ ಚೆನ್ನಮ್ಮ ಜಲಗಾರ್, ರಾಜಶೇಖರ್ ಅಂಗಡಿ, ತಿಮ್ಮರಾಜು, ಕರ್ನಾಟಕ ಮಾದಿಗ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಕುಮಾರ್, ಉಪಾಧ್ಯಕ್ಷ ನಾಗರಾಜು, ಮಹೇಶ್, ನಂದೀಶ್, ನಾಗೇಂದ್ರ, ಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT