ಸೋಮವಾರ, ಮೇ 23, 2022
20 °C

ಇಂದಿನಿಂದ ಜಾತ್ರಾ ಮಹೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ತಾಲ್ಲೂಕಿನ ಎಡೆಯೂರು ಹೋಬಳಿ ಬೀರಗಾನಹಳ್ಳಿಯ ಭ್ರಮರಾಂಬಿಕಾ ಹೊನ್ನಾದೇವಿ ಮತ್ತು ಉಮಾ ಮಹೇಶ್ವರಿ ಜಾತ್ರಾ ಮಹೋತ್ಸವವು ಇದೇ 12ರಿಂದ 14ರವರೆಗೆ ನಡೆಯಲಿದೆ.

12ರಂದು ಅಮ್ಮನವರಿಗೆ, ಆಭಯಾಂಜನೇಯ, ರಾಘವೇಂದ್ರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ, ಅಲಂಕಾರ, ಹೋಮ ನಡೆಯಲಿದೆ. ನಂತರ ಲಕ್ಷ್ಮಿವೆಂಕಟೇಶ್ವರ ಭಜನಾ ಮಂಡಳಿಯಿಂದ ಭಜನೆ ಮತ್ತು ಲಲಿತ ಸಹಸ್ರನಾಮ ಪಾರಾಯಣವಿದೆ. ಬಾಳೆಹೊನ್ನೂರು ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಪ್ರಮುಖ ಬೀದಿಗಳಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ. 14ರಂದು ಅಮ್ಮನವರ ಉತ್ಸವ ನಡೆಯಲಿದೆ ಎಂದು ದೇವಾಲಯದ ಸಮಿತಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು