ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: 20 ವರ್ಷಗಳ ನಂತರ ಹರಿದ ಜಯಮಂಗಲಿ ನದಿ

Last Updated 16 ನವೆಂಬರ್ 2021, 9:05 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಜೋರು ಮಳೆಯಾಗಿದ್ದು, ಕೆರೆ, ಕಟ್ಟೆಗಳು ಭರ್ತಿಯಾಗಿವೆ.

ಕೊರಟಗೆರೆ, ಮಧುಗಿರಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಸುಮಾರು 20 ವರ್ಷಗಳ ನಂತರ ಜಯಮಂಗಲಿ ನದಿ ತುಂಬಿ ಹರಿಯುತ್ತಿದೆ. ನದಿ ಹರಿಯುವುದನ್ನು ನೋಡಲು ಜನರು ಸಾಗರೋಪಾದಿಯಲ್ಲಿ ಜಮಾಯಿಸುತ್ತಿದ್ದಾರೆ. ಮೊಬೈಲ್‌ಗಳಲ್ಲಿ ಫೋಟೊ ತೆಗೆದುಕೊಂಡು, ವಿಡಿಯೊ ಮಾಡಿಕೊಂಡು ಇತರರಿಗೆ ಹಂಚಿಕೊಂಡು ಸಂತಸ ವ್ಯಕ್ತಪಡಿಸುತ್ತಿದ್ದ ದೃಶ್ಯಗಳು ಕಂಡುಬಂದವು.

ಕಳೆದ ಕೆಲ ವರ್ಷಗಳಿಂದ ಒಣಗಿ ನಿಂತಿದ್ದ, ನೀರನ್ನೇ ಕಾಣದ ಕೆರೆಗಳಿಗೂ ಜೀವ ಕಳೆ ಬಂದಿದೆ. ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಕೋಡಿ ಹರಿಯುತ್ತಿದೆ. ಕೆರೆ ಕೋಡಿಯಲ್ಲಿ ನೀರು ಹರಿಯುವುದನ್ನು ನೋಡಲು ಜನರು ಬರುತ್ತಿದ್ದಾರೆ.

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಮುಂಗಾರು ಅಂತ್ಯದ ನಂತರ ಅಕ್ಟೋಬರ್ ತಿಂಗಳ ಕೊನೆವರೆಗೂ ಮಳೆಯಾಗುತ್ತದೆ. ಹೆಚ್ಚೆಂದರೆ ನವೆಂಬರ್ ತಿಂಗಳ ಆರಂಭದಲ್ಲಿ ಒಂದೆರಡು ಬಾರಿ ಸುರಿಯುತ್ತದೆ. ಆದರೆ ಈ ಸಲ ನವೆಂಬರ್ ಮಧ್ಯಭಾಗದಲ್ಲೂ ಮಳೆಯಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT