ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ಶೂಟೌಟ್‌ಗೆ ಕ್ರಮ: ತುಮಕೂರು ಬೈಚೇನಹಳ್ಳಿಯಲ್ಲಿ ಸಚಿವ ಮಾಧುಸ್ವಾಮಿ ಹೇಳಿಕೆ

Last Updated 1 ಮಾರ್ಚ್ 2020, 6:39 IST
ಅಕ್ಷರ ಗಾತ್ರ

ತುಮಕೂರು: ಅರಣ್ಯ ಸಚಿವ ಆನಂದ್‌ ಸಿಂಗ್ ಜತೆ ಮಾತನಾಡಿ ಚಿರತೆ ಶೂಟೌಟ್‌ಗೆ ಆದೇಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಚಿರತೆಗೆ ಮಗು ಬಲಿಯಾದ ಹೆಬ್ಬೂರು ಹೋಬಳಿ ಬೈಚೇನಹಳ್ಳಿಗೆ ಭೇಟಿ ನೀಡಿ, ಅವರು ಸುದ್ದಿಗಾರರರೊಂದಿಗೆ ಮಾತನಾಡಿದರು.

ಈ ಮಧ್ಯೆ, ಮೃತ ಚಂದನಾಳ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮುಖಂಡರು ಗ್ರಾಮಕ್ಕೆ ಭೇಟಿ ನೀಡಿ ಕುಂಟುಬಸ್ಥರಿಗೆ ಹಾಗೂ ಗ್ರಾಮಸ್ಥರಿಗೆ ಸಾಂತ್ವಾನ ಹೇಳುತ್ತಿದ್ದಾರೆ.

ಸ್ಥಳದಲ್ಲಿ ಬಿಗಿಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ನಮಗೆ ಪರಿಹಾರ ಬೇಡ, ಚಿರತೆಯನ್ನು ಹೊಡೆದುರುಳಿಸಬೇಕು. ನನ್ನ ಮಗಳಿಗೆ ನೀಡುವ ಪರಿಹಾರವನ್ನ ಚಿರತೆಯನ್ನು ಹೊಡೆಯುವ ವ್ಯಕ್ತಿಗೆ ನೀಡಬೇಕು ಎಂದು ಚಂದನಾಳ ತಂದೆ ಶ್ರೀನಿವಾಸ್ ತಿಳಿಸಿದರು.

ಬಡವರ ಕಷ್ಟ ನಿಮಗೆ ಅರ್ಥ ಆಗಲ್ಲ, ನಿಮ್ಮ ಹೆಂಡತಿ ಮಕ್ಕಳನ್ನು ತಂದು ಇಲ್ಲಿ ಬಿಡಿ, ಅವರನ್ನು ನಾವು ಸಾಕುತ್ತೇವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT