ಭಾನುವಾರ, ಸೆಪ್ಟೆಂಬರ್ 19, 2021
24 °C
ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಡಿ.ಸಿ. ಗೌರಿಶಂಕರ್

ಜೆಡಿಎಸ್: 25 ಸಾವಿರ ಸದಸ್ಯತ್ವ ಗುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಪಕ್ಷ ಸಂಘಟನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೋಂದಣಿ ಆಭಿಯಾನ ಆರಂಭಿಸಲಾಗಿದೆ. ಪಕ್ಷದ ಎಲ್ಲ ಕಾರ್ಯಕರ್ತರು ಸದಸ್ಯತ್ವ ಪಡೆಯುವ ಮೂಲಕ ಪಕ್ಷವನ್ನು ಬಲಪಡಿಸಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಹೇಳಿದರು.

ಜೆಡಿಎಸ್ ಕಚೇರಿಯಲ್ಲಿ ಶನಿವಾರ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

2023ರ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರ ಹಿಡಿಯುವಂತೆ ಮಾಡಬೇಕು. ಸ್ಪಷ್ಟ ಬಹುಮತ ನೀಡುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯ ಮಂತ್ರಿಯನ್ನಾಗಿ ಮಾಡುವ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.

ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಐದು ಸಾವಿರ ಕಾರ್ಯಕರ್ತರನ್ನು ನೋಂದಾಯಿಸುವಂತೆ ಸೂಚನೆ ನೀಡಿದ್ದಾರೆ. ಆದರೆ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವಿಸ್ತಾರವಾಗಿದ್ದು, ಕನಿಷ್ಠ 25 ಸಾವಿರ ಸದಸ್ಯತ್ವವಾಗಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದೇನೆ. ಮೊದಲ ಹಂತದಲ್ಲಿ ತಲಾ ಐದು ಸಾವಿರ ಕಾರ್ಯಕರ್ತರನ್ನು ನೋಂದಾಯಿಸಿ, ಮುಂದಿನ ಶನಿವಾರದೊಳಗೆ ಐದು ಸಾವಿರ ಸದಸ್ಯತ್ವ ನೋಂದಾಯಿಸಲು ಸೂಚಿಸಿದ್ದಾರೆ ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜನಪ್ಪ ಮಾತನಾಡಿ, ಜೆಡಿಎಸ್ ಸದಸ್ಯತ್ವ ಅಭಿಯಾನದ ಮೂಲಕ ಹೊಸ ಶಖೆ ಆರಂಭವಾಗಿದೆ. ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ 20 ತಿಂಗಳ ಆಡಳಿತವನ್ನು ಜನರು ಇಂದಿಗೂ ಮರೆತಿಲ್ಲ. ಬಡವರಿಗೆ ನೂರಾರು ಕಾರ್ಯಕ್ರಮಗಳನ್ನು ನೀಡಿ,
ಜನರು ನೆಮ್ಮದಿಯಿಂದ ಬದುಕುವಂತೆ ಮಾಡಿದ್ದಾರೆ. ಪಕ್ಷವನ್ನು ಪ್ರಜಾಸತ್ತಾತ್ಮಕವಾಗಿ ಕಟ್ಟುವ ನಿಟ್ಟಿನಲ್ಲಿ ಈ ಸದಸ್ಯತ್ವ ಅಭಿಯಾನ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್., ನಾಗರಾಜು ನಗರ ಅಧ್ಯಕ್ಷ ಬೆಳ್ಳಿ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ಹಾಲೆನೂರು ಅನಂತಕುಮಾರ್, ರಾಜ್ಯ ಉಪಾಧ್ಯಕ್ಷ ಎಂ. ಗಂಗಣ್ಣ, ಕೆಂಪಹನುಮಯ್ಯ, ಸೊಗಡು ವೆಂಕಟೇಶ್, ಸೈಯದ್ ಪೈಯು, ವಿಶ್ವೇಶ್ವರಯ್ಯ, ಮಹಿಳಾ ಘಟಕ ಜಿಲ್ಲಾದ್ಯಕ್ಷೆ ತಾಹೀರ ಬಾನು, ನಗರ ಅಧ್ಯಕ್ಷ ಜಯಶ್ರೀ, ಪ್ರಧಾನ ಕಾರ್ಯದರ್ಶಿ ಲೀಲಾವತಿ, ನಗರ ಕಾರ್ಯದರ್ಶಿ ಯಶೋಧ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು