ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖ: ವಿ. ಸೋಮಣ್ಣ ಅಭಿಮತ

ಕಾರ್ಯಕರ್ತರು ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಭಿಮತ
Published 30 ಮಾರ್ಚ್ 2024, 14:20 IST
Last Updated 30 ಮಾರ್ಚ್ 2024, 14:20 IST
ಅಕ್ಷರ ಗಾತ್ರ

ಕೊರಟಗೆರೆ: ‘ಜೆಡಿಎಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಈ ಚುನಾವಣೆ ನರೇಂದ್ರಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡುವುದು ಮತ್ತು ಮಾಜಿ ಪ್ರಧಾನಿ ದೇವೇಗೌಡರ ಸ್ವಾಭಿಮಾನವನ್ನು ಗೆಲ್ಲಿಸುವ ಚುನಾವಣೆಯಾಗಿದೆ’ ಎಂದು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಈ ಚುನಾವಣೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನ ಚುನಾವಣೆಯಾಗಿದೆ. ಗೆದ್ದ ನಂತರವೂ ಎರಡು ಪಕ್ಷಗಳು ಸಮಾನ ಮನಸ್ಸಿನಿಂದ ಕೆಲಸ ಮಾಡಲಿವೆ. ಏಪ್ರಿಲ್‌ 3ರಂದು ನಾಮಪತ್ರ ಸಲ್ಲಿಸಲಾಗುವುದು ಎಂದರು.

ನಾನು ತುಮಕೂರು ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಆಯ್ಕೆಯಾದ ನೂರು ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ₹10 ಸಾವಿರ ಕೋಟಿಯನ್ನು ಕೇಂದ್ರ ಸರ್ಕಾರದಿಂದ ತರಲಾಗುವುದು. ಅದರಲ್ಲಿ ಎತ್ತಿನಹೊಳೆ ಯೋಜನೆಗೆ ಆದ್ಯತೆ ನೀಡಲಾಗುವುದು. ರಾಯದುರ್ಗಾ ಮತ್ತು ತುಮಕೂರು ತ್ವರಿತ ರೈಲ್ವೆ ಕಾಮಗಾರಿ, ಪ್ರಧಾನಿ ಗ್ರಾಮ ಸಡಕ್ ಯೋಜನೆಯಲ್ಲಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ರಸ್ತೆ ಸೇರಿದಂತೆ ಮೂಲ ಸೌಕರ್ಯ, ಹೈಟೆಕ್ ಆಸ್ಪತ್ರೆ, ನೀರಾವರಿಗೆ ಆದ್ಯತೆ, ಕೈಗಾರಿಕೆಗಳ ಸ್ಥಾಪನೆ, ಸಿದ್ಧರಬೆಟ್ಟ ಕ್ಷೇತ್ರದಲ್ಲಿ ಆಯುರ್ವೇದ ವಿಶ್ವವಿದ್ಯಾನಿಲಯ ಸೇರಿದಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಲಾವುಗುವುದು ಎಂದರು.

ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ, ಎರಡು ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಿ ಶಕ್ತಿ ಪ್ರದರ್ಶಿಸಬೇಕು ಎಂದರು.

ಶಾಸಕ ಸುರೇಶ್ ಗೌಡ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಸುಧಾಕರ್ ಲಾಲ್ ಹಾಗೂ ಅನಿಲ್ ಕುಮಾರ್ ಈಗ ಒಂದಾಗಿದ್ದು, ಸೋಮಣ್ಣ ಅವರು ಈ ಕ್ಷೇತ್ರದಲ್ಲಿ ಸೋತರೆ ಅದು ಅವರಿಗಾಗುವ ಅವಮಾನವಲ್ಲ. ದೇವೇಗೌಡ, ಕುಮಾರಸ್ವಾಮಿಗೆ ಆಗುವ ಅವಮಾನ ಎಂಬುದನ್ನು ಅರಿಯಬೇಕು ಎಂದರು.

ಅಭ್ಯರ್ಥಿ ಬಿ.ಎಚ್.ಅನಿಲ್‌ಕುಮಾರ್‌ ಮಾತನಾಡಿ, ಈ ಬಾರಿ ಸೋಮಣ್ಣ ಅವರು ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಯೊಂದಿಗೆ ಬೈಕ್ ರ‍್ಯಾಲಿ, ಮೆರವಣಿಗೆ ನಡೆಸಿದರು.

ಶಾಸಕ ಗೋಪಾಲಯ್ಯ, ಮಾಜಿ ಶಾಸಕ ನೆ.ಲಾ. ನರೇಂದ್ರ ಬಾಬು, ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ಕೊರಟಗೆರೆ ಮಂಡಲದ ಅಧ್ಯಕ್ಷ ದರ್ಶನ್, ಮಾಜಿ ಅಧ್ಯಕ್ಷ ಎಸ್.ಪವನ್ ಕುಮಾರ್, ಜೆಡಿಎಸ್ ಕಾರ್ಯಾಧ್ಯಕ್ಷ ಜೆ.ಎನ್.ನರಸಿಂಹರಾಜು, ಜಿ.ಪಂ.ಮಾಜಿ ಸದಸ್ಯ ಜಿ.ಆರ್. ಶಿವರಾಮಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರದೀಪ್, ಪುಟ್ಟನರಸಯ್ಯ, ಲಕ್ಷ್ಮೀನಾರಾಯಣ್ ಮುಖಂಡರರಾದ ಲಕ್ಷ್ಮಣ್, ಲಕ್ಷ್ಮೀಶ, ರಮೇಶ್, ಗುರುದತ್, ಹನುಮಂತರಾಯಪ್ಪ, ಸ್ವಾಮಿ, ಪ್ರಕಾಶ್ ಪಾಲ್ಗೊಂಡಿದ್ದರು.

ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದಾರೆ. ಆದರೆ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಸಿಕಿಲ್ಲ. ಯಾವುದೇ ಯೋಜನೆ ತರಲಾಗದಂತಹ ಪ್ರಯೋಜನ ಇಲ್ಲದ ಖಾತೆಯನ್ನು ಇಬ್ಬರು ಸಚಿವರಿಗೆ ನೀಡಲಾಗಿದೆ.
ಬಿ.ಸುರೇಶ್ ಗೌಡ ಬಿಜೆಪಿ ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT