ತುಮಕೂರು: ನಗರದ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ಶುಶ್ರೂಷಕಿಯರು, ಪೊಲೀಸರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ, ಬಡವರಿಗೆ ಜಿಲ್ಲಾ ಮತ್ತು ನಗರ ಜೆಡಿಎಸ್ ಘಟಕದಿಂದ ಉಚಿತ ದಾಸೋಹ ವ್ಯವಸ್ಥೆ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಗುರುವಾರ ದಾಸೋಹ ವ್ಯವಸ್ಥೆಗೆ ಚಾಲನೆ ನೀಡಲಾಯಿತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಮಾತನಾಡಿ, ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಆಶಯದಂತೆ ಈ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕರ್ತರು ಅವರಿರುವ ಸ್ಥಳಕ್ಕೆ ತೆರಳಿ ಆಹಾರ ವಿತರಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ, ‘ಕೊರೊನಾ ಸೋಂಕಿನಿಂದ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಲಾಕ್‍ಡೌನ್ ಮಾಡಿದ್ದಾರೆ. ಇದಕ್ಕೆ ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಗೋವಿಂದರಾಜು, ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜ್, ರಾಜ್ಯ ಹಿರಿಯ ಉಪಾಧ್ಯಕ್ಷ ಗಂಗಣ್ಣ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಆರ್.ದೇವರಾಜು, ನಗರ ಘಟಕದ ಅಧ್ಯಕ್ಷ ಬೆಳ್ಳಿ ಲೋಕೇಶ್, ಉಪಮೇಯರ್ ಶಶಿಕಲಾ, ಪಾಲಿಕೆ ಸದಸ್ಯರಾದ ಧರಣೇಂದ್ರ ಕುಮಾರ್, ಶ್ರೀನಿವಾಸ್, ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.