ಗುಬ್ಬಿ:ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ನಾಯಕರ ವಿರುದ್ಧ ಸ್ವಪಕ್ಷೀಯರನ್ನೇ ಎತ್ತಿ ಕಟ್ಟುತ್ತಾರೆ ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಟೀಕಿಸಿದ್ದಾರೆ.

ಸ್ವಪಕ್ಷೀಯರನ್ನೇ ಎತ್ತಿಕಟ್ಟುವ ಕೆಲಸವನ್ನು ಕುಮಾರಸ್ವಾಮಿ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಪ್ರತಿ ವಿಧಾನಾಸಭಾ ಕ್ಷೇತ್ರದಲ್ಲೂ ಇಬ್ಬರೂ ಅಭ್ಯರ್ಥಿಗಳನ್ನು ಗುರುತಿಸುವ ಜೊತೆಗೆ ಶಾಸಕರ ವಿರುದ್ಧ ಪ್ರತಿಸ್ಪರ್ಧಿ ಹುಟ್ಟು ಹಾಕುವ ಕಲೆ ರೂಢಿಸಿಕೊಂಡಿದ್ದಾರೆ ಎಂದು ಅವರು ದೂರಿದ್ದಾರೆ.

’ಕುಮಾರಸ್ವಾಮಿ ಅವರ ಮೇಲೆ ಬೇಸರವಿಲ್ಲ. ಅವರೇ ನನ್ನ ಮೇಲೆ ಕೋಪಿಸಿಕೊಂಡು, ನನ್ನ ವಿರುದ್ಧ ಸ್ವಪಕ್ಷಿಯರನ್ನೇ ಎತ್ತಿಕಟ್ಟುತ್ತಾ, ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯನ್ನು ಹುಡುಕುವ ಪ್ರಯತ್ನ ಮಾಡುತ್ತಿರಬಹುದು’ ಎಂದರು.

ಕಡಬ ಹೋಬಳಿ ಅರೆಮಾರನಹಳ್ಳಿ ಗ್ರಾಮದಲ್ಲಿ ಭಾನುವಾರ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಬಡವರ ಪರ ಕಾಳಜಿ ಹೊಂದಿದ್ದು, ಸದಾ ರೈತಪರ ಚಿಂತನೆ ಮಾಡುತ್ತಾರೆ. ಅವರ ಚೈತನ್ಯಕ್ಕೆ ಇನ್ನೂ ಇಪ್ಪತ್ತು ವರ್ಷ ಸಿಕ್ಕರೂ ಪಕ್ಷ ಸಂಘಟನೆಯನ್ನು ಬಲಿಷ್ಠ ಮಾಡಬಲ್ಲರು ಎಂದು ಶ್ರೀನಿವಾಸ್ ಹೇಳಿದರು.

ಮಠದಹಳ್ಳ ಕೆರೆಗೆ ಹೇಮೆ ಹರಿಸುವ ಯೋಜನೆಗೆ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಧರ್ಭದಲ್ಲಿ ಕುಮಾರಸ್ವಾಮಿಯೊಂದಿಗೆ ಚರ್ಚಿಸಿ ₹25.65 ಕೋಟಿ ವೆಚ್ಚದ ಟೆಂಡರ್ ಮುಗಿಸಿ ಕಾಮಗಾರಿ ಆರಂಭಿಸಬೇಕಿತ್ತು. ಆದರೆ ಬದಲಾದ ಸರ್ಕಾರದಿಂದ ಕೆಲಸ ವಿಳಂಬವಾಯಿತು. ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ಈ ಮಠದಹಳ್ಳ ಕೆರೆಯ ಯೋಜನೆಯನ್ನು ಎತ್ತಿನಹೊಳೆ ಯೋಜನೆಗೆ ಒಳಪಡಿಸುವ ಬಗ್ಗೆ ಚರ್ಚಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.