ಶುಕ್ರವಾರ, ಫೆಬ್ರವರಿ 26, 2021
18 °C

ಆಭರಣ ಮಳಿಗೆಯಲ್ಲಿ ಕಳ್ಳತನ; ಐದು ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದ ಆಭರಣ ಅಂಗಡಿಯೊಂದರಲ್ಲಿ ₹ 1.30 ಕೋಟಿ ಮೌಲ್ಯದ 2.470 ಕೆ.ಜಿ ಚಿನ್ನಾಭರಣ ಕಳ್ಳತನ ಮಾಡಿದ ಆರೋಪದ ಮೇಲೆ ಐದು ಮಂದಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ತುಮಕೂರಿನ ವಿನೋಬ ನಗರದ ಮೊಹಮದ್, ಗುಬ್ಬಿಯ ಮಹೇಶ್, ಮೀನಾಕ್ಷಿ, ಹೆಬ್ಬೂರಿನ ರುಕ್ಸಾನ, ಕೇರಳದ ಪೆರಿಗೆರ ಗ್ರಾಮದ ರಿತೇಶ್ ಕುರುಪ್ ಬಂಧಿತರು.

ಮೊಹಮದ್ ಮತ್ತು ರಿತೇಶ್ ಕುರುಪ್ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಇಬ್ಬರಿಗೆ ಉಳಿದ ಆರೋಪಿಗಳು ನೆರವಾಗಿದ್ದರು. ಆರೋಪಿಗಳಿಂದ 1.854 ಗ್ರಾಂ ಚಿನ್ನಾಭರಣ ಹಾಗೂ ₹ 4.05 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಪತ್ತೆಗೆ ನಗರ ಠಾಣೆ ಸಿಪಿಐ ಬಿ.ನವೀನ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.