ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಮೇಳಕ್ಕೆ ನೋಂದಣಿ

Last Updated 2 ಫೆಬ್ರುವರಿ 2019, 14:35 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ನಿರುದ್ಯೋಗಿಗಳಿಗೆ ಫೆ. 16 ಹಾಗೂ 17 ರಂದು ಹಮ್ಮಿಕೊಂಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಆಕಾಂಕ್ಷಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಎಲ್ಲ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಹಶೀಲ್ದಾರರ ಜೊತೆ ವಿಡಿಯೊ ಕಾನ್ಫರೆನ್ಸ್ ನಡೆಸಿದದರು.

‘ಫೆ.5, 6ರಂದು ತಿಪಟೂರು, ಕುಣಿಗಲ್, ಪಾವಗಡ, ಮಧುಗಿರಿ, ಶಿರಾ, ತುರುವೇಕೆರೆ ಹಾಗೂ ಕೊರಟಗೆರೆಯ ತಾಲ್ಲೂಕು ಕೇಂದ್ರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಫೆ.7, 8ರಂದು ತುಮಕೂರು, ಗುಬ್ಬಿ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕು ಕೇಂದ್ರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ನೋಂದಾಯಿಸಿಕೊಂಡವರಿಗೆ ಅದೇ ದಿನ ಆ ಕಾಲೇಜಿನಲ್ಲಿ ತರಬೇತಿ ಸಹ ನೀಡಲಾಗುವುದು. ಎಸ್‌ಎಸ್‌ಎಲ್‌ಸಿ, ಪದವಿ. ಐಟಿಐ ಉತ್ತೀರ್ಣರಾದವರು ತರಬೇತಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ http://tumkurandchitradurgajobfair.in ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕೆ. ಶ್ರೀನಿವಾಸ್, ಸಹಾಯಕ ನಿರ್ದೇಶಕ ಬಿ. ವಿಶ್ವೇಶ್ವರ, ಪಾಲಿಕೆ ಉಪ ಆಯುಕ್ತ ಶಿವಣ್ಣ, ವಿವಿಧ ಕಾಲೇಜಿನ ಪ್ರಾಂಶುಪಾಲರು ಇದ್ದರು.

ಆನ್‌ಲೈನ್ ನೋಂದಣಿ: ನಿರುದ್ಯೋಗಿ ಯುವಕ, ಯುವತಿಯರು http://tumkurandchitradurgajobfair.in ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT