ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು- ಚಿತ್ರದುರ್ಗ ಜಿಲ್ಲೆಗಳ ಬೃಹತ್ ಉದ್ಯೋಗ ಮೇಳ ಉದ್ಘಾಟನೆ

Last Updated 16 ಫೆಬ್ರುವರಿ 2019, 7:09 IST
ಅಕ್ಷರ ಗಾತ್ರ

ತುಮಕೂರು: ತುಮಕೂರು- ಚಿತ್ರದುರ್ಗ ಜಿಲ್ಲೆಗಳ ಬೃಹತ್ ಉದ್ಯೋಗ ಮೇಳ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಪ್ರಾರಂಭಗೊಂಡಿತು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಉದ್ಯೋಗ ಮೇಳ ಉದ್ಘಾಟಿಸಿದರು. ಕಾರ್ಮಿಕ ಸಚಿವ ವೆಂಕಟರಮಣಪ್ಪ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಶಾಸಕ ಜಿ.ಬಿ.ಜ್ಯೋತಿ ಗಣೇಶ್ , ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ, ಬಿ.ಎನ್. ಚಂದ್ರಪ್ಪ ಭಾಗವಹಿಸಿದ್ದರು. ಸಿದ್ಧಗಂಗಾಮಠದ ಅಧ್ಯಕ್ಷ ಡಾ.ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು.

ಎರಡು ದಿನ ನಡೆಯುವ ಮೇಳಕ್ಕೆ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ.

7 ನೇ ತರಗತಿ ಪಾಸ್ , ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಪದವಿ, ಐಟಿಐ, ಅಪ್ರೆಂಟಿಸ್ ತರಬೇತಿ ಪಡೆದ, ಬಿ.ಇ ಡಿಪ್ಲೊಮಾ ಎಲ್ಲ ಟ್ರೇಡ್, ನರ್ಸಿಂಗ್, ಪ್ಯಾರಾ ಮೆಡಿಕಲ್ ಕೋರ್ಸ್ ಪಾಸಾದವರು ಸೇರಿದಂತೆ ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಯುಳ್ಳವರು ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT