ಫೆ.2,3ಕ್ಕೆ ಉದ್ಯೋಗ ಮೇಳ

7
ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯ ಉದ್ಯೋಗಾರ್ಥಿಗಳಿಗೆ ಅವಕಾಶ

ಫೆ.2,3ಕ್ಕೆ ಉದ್ಯೋಗ ಮೇಳ

Published:
Updated:
Prajavani

ತುಮಕೂರು: ‘ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಫೆ.2 ಮತ್ತು 3 ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೇಳದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇಳದಲ್ಲಿ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಉದ್ಯೋಗಾರ್ಥಿಗಳು ಭಾಗವಹಿಸಬಹುದು ಎಂದರು. 

ಮೇಳವನ್ನು ಯಶಸ್ವಿಯಾಗಿಸುವ ಸಲುವಾಗಿ ಸ್ವಾಗತ, ವೇದಿಕೆ, ಆರೋಗ್ಯ ಮತ್ತು ಸ್ವಚ್ಛತಾ, ಆಹಾರ, ಸಮನ್ವಯ ಸಮಿತಿ ಸೇರಿದಂತೆ ಇತರೆ ಉಪ ಸಮಿತಿಗಳನ್ನು ರಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಕಾರ್ಯಗಳನ್ನು ನಿಯೋಜಿಸಿದರು.

ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲ ತಹಶೀಲ್ದಾರ್ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಭೆ ನಡೆಸಬೇಕು ಎಂದು ಸೂಚಿಸಿದರು.

ಉದ್ಯೋಗಾಕಾಂಕ್ಷಿಗಳಿಗೆ ಜ.23 ರಿಂದ 29ರ ಒಳಗೆ ಕೌಶಲ ಹೆಚ್ಚಿಸುವ ಸಂದರ್ಶನಗಳನ್ನು ಎದುರಿಸುವ ಬಗ್ಗೆ ಕಾರ್ಯಾಗಾರ ಏರ್ಪಡಿಸಬೇಕು.  ಕಾರ್ಯಾಗಾರದಲ್ಲಿ ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅನುವಾಗುವಂತೆ ಆಯಾ ಕಾಲೇಜು ಪ್ರಾಂಶುಪಾಲರನ್ನು ತಾಲ್ಲೂಕು ಮಟ್ಟದ ಸಭೆಗೆ ಆಹ್ವಾನಿಸಬೇಕು ಎಂದು ಹೇಳಿದರು.

 ಮೇಳಕ್ಕೆ ಬರುವವರಿಗೆ ಉಚಿತ ಊಟದ ವ್ಯವಸ್ಥೆ, ಕುಡಿಯುವ ನೀರು ಹಾಗೂ 20 ಸಂಚಾರಿ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !