ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ: ಅಂಗನವಾಡಿಗೆ ಭೇಟಿ ನೀಡಿದ ನ್ಯಾಯಾಧೀಶೆ

Published 6 ಜೂನ್ 2024, 14:14 IST
Last Updated 6 ಜೂನ್ 2024, 14:14 IST
ಅಕ್ಷರ ಗಾತ್ರ

ಗುಬ್ಬಿ: ಅಂಗನವಾಡಿ ಕೇಂದ್ರಗಳ ಸ್ಥಿತಿಗತಿಗಳ ಬಗ್ಗೆ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದ ಕಾಯಿ ಪೇಟೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನ್ಯಾಯಾಧೀಶೆ ವಿನುತಾ ಭೇಟಿ ನೀಡಿ ಪರಿಶೀಲಿಸಿದರು.

ಮಕ್ಕಳಿಗೆ ನೀಡುವ ಆಹಾರಧಾನ್ಯ ಹಾಗೂ ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಮಕ್ಕಳಿಗೆ ತಿಂಡಿ ನೀಡಲು ಬಳಸುವ ರೆವೆಯಲ್ಲಿ ಇರುವೆಗಳನ್ನು ಗಮನಿಸಿದ ನ್ಯಾಯಾಧೀಶೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಮಕ್ಕಳಿಗೆ ನೀಡುವ ಆಹಾರದಲ್ಲಿ ಎಲ್ಲ ಪೌಷ್ಟಿಕಾಂಶ ಇರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದ ಆಹಾರ ಧಾನ್ಯಗಳನ್ನು ಮಾತ್ರ ಬಳಸಬೇಕು. ಅಡುಗೆ ಮಾಡಲು ಬಳಸುವ ಪಾತ್ರೆ ಹಾಗೂ ಕೊಠಡಿಯನ್ನು ಸ್ವಚ್ಛವಾಗಿಟ್ಟುಕೊಂಡು, ಅಡುಗೆಗೆ ಶುದ್ಧ ನೀರನ್ನು ಬಳಸಬೇಕು ಎಂದು ಸೂಚಿಸಿದರು.

ಅಂಗನವಾಡಿಗಳ ಬಗ್ಗೆ ಯಾವುದೇ ದೂರು ಬಂದಲ್ಲಿ ಸಂಬಂಧಿಸಿದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವಂತೆ ಅಂಗನವಾಡಿ ಪರಿಸರವನ್ನು ಇಟ್ಟುಕೊಳ್ಳಬೇಕು. ಸರ್ಕಾರ ಒದಗಿಸುವ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವ್ಯವಸ್ಥಿತವಾಗಿ ಮಕ್ಕಳಿಗೆ ನೀಡಬೇಕು. ಯಾವುದೇ ಮಗು ಅಪೌಷ್ಟಿಕತೆಯಿಂದ ಬಳಲುವಂತೆ ಆಗಬಾರದು. ಮಗುವಿನ ಬೆಳವಣಿಗೆ ಹಾಗೂ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು ಎಂದರು.

ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿ ಕೃಷ್ಣ, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT