ಕಡರನಾಯ್ಕನಹಳ್ಳಿ: ಪರಿಸರ ನೈರ್ಮಲ್ಯ ಹಾಗೂ ಸಮುದಾಯದ ಸಹಭಾಗಿತ್ವದಿಂದ ಮಾತ್ರ ಡೆಂಗಿ ನಿಯಂತ್ರಣ ಸಾಧ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಅಬ್ದುಲ್ ಖಾದರ್ ಹೇಳಿದರು.

ಸಮೀಪದ ಹೊಳೆ ಸಿರಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತೀವ್ರ ಜ್ವರ, ಮೈಕೈ ನೋವು, ತಲೆನೋವು, ತಲೆ, ಹಣೆಯ ಹಿಂಭಾಗದಲ್ಲಿ ನೋವು, ವಾಕರಿಕೆ, ವಾಂತಿ ಆಗುವುದು, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತು, ಬಾಯಿ ಮತ್ತು ಒಸಡುಗಳಲ್ಲಿ ರಕ್ತಸ್ರಾವ ಸೇರಿದಂತೆ ಡೆಂಗಿ, ಚಿಕೂನ್ಗುನ್ಯದ ಲಕ್ಷಣಗಳು ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ಡಾ. ಚೇತನ್ ಸಲಹೆ ನೀಡಿದರು.

ಮಳೆಗಾಲದಲ್ಲಿ ಗುಂಡಿ ಹಾಗೂ ಘನತ್ಯಾಜ್ಯಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಿ ವಿಲೇವಾರಿ ಮಾಡುವಂತೆ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಉಮ್ಮಣ್ಣ ಸೂಚಿಸಿದರು.

‘ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ’ ಎಂಬುದು ಡೆಂಗಿ ನಿಯಂತ್ರಣದ ಧ್ಯೇಯವಾಕ್ಯವಾಗಿದೆ ಎಂದು ಆರೋಗ್ಯ ಶಿಕ್ಷಣಾಧಿಕಾರಿ ನಾಗರಾಜ ವಿವರಿಸಿದರು.

ಮನೆ-ಮನೆ ಭೇಟಿಗೆ ಬರುವ ಆಶಾ ಹಾಗೂ ಆರೋಗ್ಯ ಸಿಬ್ಬಂದಿ ಜತೆ ಸಾರ್ವಜನಿಕರು ಸಹಕರಿಸುವಂತೆ ನಿರೀಕ್ಷಣಾಧಿಕಾರಿ ಪ್ರಹ್ಲಾದ್ ಮನವಿ ಮಾಡಿದರು.

ಆರೋಗ್ಯ ಸಿಬ್ಬಂದಿ, ಪ್ರಯೋಗಾಲಯ ತಜ್ಞರು, ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-43-481410945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.