ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರ ಮನೆಯಲ್ಲಿ ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮೀಜಿ ಪೂಜೆ

Last Updated 30 ಜನವರಿ 2021, 7:28 IST
ಅಕ್ಷರ ಗಾತ್ರ

ತುಮಕೂರು: ಪರಿಶಿಷ್ಟ ಪಂಗಡದ ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯವು ಹಮ್ಮಿಕೊಂಡಿರುವ ಪಾದಯಾತ್ರೆ ತಾಲ್ಲೂಕಿನ ಕೋರ ಗ್ರಾಮ ತಲುಪಿದ್ದು, ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಮುಸ್ಲಿಮರ ಮನೆಯಲ್ಲಿ ಪೂಜೆ ಸಲ್ಲಿಸಿ ಉಪಾಹಾರ ಸ್ವೀಕರಿಸಿದರು.

ಪಾದಯಾತ್ರೆ ಶನಿವಾರ ಬೆಳಿಗ್ಗೆ 9 ಗಂಟೆಗೆ ಕೋರ ತಲುಪಿತು. ಗ್ರಾಮದ ಮುಸ್ಲಿಂ ಮುಖಂಡ ನಜೀರ್ ಅಹಮದ್ ಮನೆಯಲ್ಲಿ ವಿಶ್ರಾಂತಿ ಪಡೆದರು. ನಜೀರ್, ಗೌರವದೊಂದಿದೆ ಸ್ವಾಮೀಜಿ ಅವರನ್ನು ತಮ್ಮ ಮನೆಗೆ ಬರಮಾಡಿಕೊಂಡರು.

ಅಲ್ಲಿಯೇ ಶ್ರೀಗಳು ಸ್ನಾನ, ಪೂಜೆ ಕೈಗೊಂಡು ಉಪಾಹಾರ ಸ್ವೀಕರಿಸಿದರು.

ವಿಧಾನ ಪರಿಷತ್ ಸದಸ್ಯ ಹೆಚ್.ಎಂ ರೇವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಮುರಳೀಧರ ಹಾಲಪ್ಪ ಇತರರು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT