ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲೇಶ್ವರ ಜಾತ್ರೆ ಸಂಭ್ರಮ

Last Updated 7 ಮಾರ್ಚ್ 2023, 9:59 IST
ಅಕ್ಷರ ಗಾತ್ರ

ಗುಬ್ಬಿ: ನಿಟ್ಟೂರು ಹೋಬಳಿಯ ಎನ್. ಪುರ ಗ್ರಾಮದಲ್ಲಿ ಕಲ್ಲೇಶ್ವರ ಸ್ವಾಮಿ ಹಾಗೂ ಪಾರ್ವತಿ ದೇವಿ ರಥೋತ್ಸವ ಸೋಮವಾರ ಅದ್ದೂರಿಯಾಗಿ ನೆರವೇರಿತು.

ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜೆ, ರುದ್ರಾಭಿಷೇಕ, ಕ್ಷೀರಾಭಿಷೇಕ, ಗಂಧದ ಅಭಿಷೇಕ, ಅರಿಸಿನ-ಕುಂಕುಮ ಅರ್ಚನೆ ಇತ್ಯಾದಿ ಪೂಜಾ ಕಾರ್ಯ ನೆರವೇರಿದವು. ಮಹಾ ಮಂಗಳಾರತಿ ನಂತರ ಉತ್ಸವ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ತಂದು ಪುಷ್ಪಾಲಂಕೃತ ರಥದಲ್ಲಿ ಕೂರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ರಥವು ಮುಂದೆ ಸಾಗಿದಂತೆ ಭಕ್ತರು ದವನ ಚುಚ್ಚಿದ ಬಾಳೆಹಣ್ಣು ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು. ರಥೋತ್ಸವದ ನಂತರ ಭಕ್ತರಿಗೆ ಪಾನಕ, ಫಲಹಾರ, ಮಜ್ಜಿಗೆ ವಿತರಿಸಲಾಯಿತು. ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ಗ್ರಾಮಸ್ಥರು ದಾಸೋಹದ ವ್ಯವಸ್ಥೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT