ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯಲೋಪ: ಕಲ್ಲೂರು ಪಿಡಿಒ ಗಂಗ ಮಹಾದೇವಯ್ಯ ಅಮಾನತು

Published 3 ಜೂನ್ 2023, 13:36 IST
Last Updated 3 ಜೂನ್ 2023, 13:36 IST
ಅಕ್ಷರ ಗಾತ್ರ

ಗುಬ್ಬಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ಕಲ್ಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಮಹಾದೇವಯ್ಯ ಅವರನ್ನು ಅಮಾನತು ಮಾಡಲಾಗಿದೆ.

ತಾಲ್ಲೂಕಿನ ಕಡಬ ಹೋಬಳಿ ಕಲ್ಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ವಿದ್ಯಾಕುಮಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರದೆ ನಿಯಮ ಬಾಹಿರವಾಗಿ ನಿವೇಶನ ಹಕ್ಕುಪತ್ರ ವಿತರಣೆ, ಇ- ಸ್ವತ್ತು ಮಾಡಿಕೊಡುವಲ್ಲಿ ಭ್ರಷ್ಟಾಚಾರ, ಹಣಕಾಸು ದುರುಪಯೋಗ ಜೊತೆಗೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೆ ಲೋಪ ಎಸಗಿದ್ದ ಆರೋಪದಲ್ಲಿ ತನಿಖೆ ನಡೆಸಿ ಅಮಾನತು ಆದೇಶ ಹೊರಡಿಸಲಾಗಿದೆ.

ಈ ಅಧಿಕಾರಿಯ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಗ್ರಾಮದ ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT