ಹುಳಿಯಾರು: ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಹೊಸ್ತಿಲಲ್ಲಿ ಸುವರ್ಣ ವರ್ಷಾಚರಣೆ ಅಂಗವಾಗಿ ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥಯಾತ್ರೆ ಸೋಮವಾರ ಪಟ್ಟಣಕ್ಕೆ ಆಗಮಿಸಿತು. ತಾಲ್ಲೂಕು ಆಡಳಿತ, ಕಸಾಪ, ಕರವೇ ಸೇರಿದಂತೆ ಇತರ ಸಂಘಟನೆಗಳ ಪದಾಧಿಕಾರಿಗಳು ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿ ಬೀಳ್ಕೊಟ್ಟರು.

ಹೊಸದುರ್ಗ ತಾಲ್ಲೂಕಿನಿಂದ ಬೆಳಗೆ ಹೊರಟ ರಥಯಾತ್ರೆಯನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕು ಸಂಧಿಸುವ ಮೋಟಿಹಳ್ಳಿ ವಡ್ಡರಹಟ್ಟಿ ಗೇಟ್ ಬಳಿ ಗಡುಕಲ್ಲು ಬಳಿ ತಹಶೀಲ್ದಾರ್ ಹಾಗೂ ತಾಲ್ಲೂಕು ಕಸಾಪ ಪದಾಧಿಕಾರಿಗಳು ಸ್ವಾಗತಿಸಿದರು.

ನಂತರ ಯಳನಾಡು ಮಾರ್ಗವಾಗಿ ಹುಳಿಯಾರು ಪಟ್ಟಣಕ್ಕೆ ಆಗಮಿಸಿತು. ಪಟ್ಟಣದ ಕನಕ ವೃತ್ತದ ಬಳಿ ಸ್ವಾಗತ ನೀಡಲಾಯಿತು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ಜಿಎಚ್ಪಿಎಸ್ ಶಾಲೆ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.

ಬಿ.ಎಚ್ ರಸ್ತೆಯಲ್ಲಿ ಸಾಗಿದ ರಥವನ್ನು ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಜಯಘೋಷ ಕೂಗುತ್ತಾ ಎಪಿಎಂಸಿವರೆಗೆ ಮೆರವಣಿಗೆಯಲ್ಲಿ ಸಾಗಿ ಬೀಳ್ಕೊಟ್ಟರು. ಜಿಲ್ಲಾ ಕಸಾಪ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ತಾಲ್ಲೂಕು ಘಟಕದ ರವಿಕುಮಾರ್ ಕಟ್ಟೇಮನೆ, ಹೋಬಳಿ ಘಟಕದ ಅಧ್ಯಕ್ಷ ನಾರಾಯಣಪ್ಪ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್ ಕೆಂಕೆರೆ, ಪ್ರಭಾರ ತಹಶೀಲ್ದಾರ್ ಕೀರ್ತಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಮೆಡಿಕಲ್ ಚನ್ನಬಸವಯ್ಯ, ಹೋಬಳಿ ಘಟಕದ ಅಧ್ಯಕ್ಷ ಬೇಕರಿ ಪ್ರಕಾಶ್, ಕಲಾವಿದ ಗೌಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು, ಕಂದಾಯ ತನಿಖಾಧಿಕಾರಿ ಶ್ರೀನಿವಾಸ್ ಸೇರಿದಂತೆ ಕರವೇ, ಕಸಾಪ ಇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.