ತುಮಕೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
8 ಕ್ಷೇತ್ರಗಳಿಗೆ ಬಹುತೇಕ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಕೊರಟಗೆರೆ ಕ್ಷೇತ್ರದಿಂದ ಶಾಸಕ ಡಾ.ಜಿ.ಪರಮೇಶ್ವರ, ಶಿರಾದಿಂದ ಟಿ.ಬಿ.ಜಯಚಂದ್ರ, ಮಧುಗಿರಿಯಿಂದ ಕೆ.ಎನ್.ರಾಜಣ್ಣ, ಪಾವಗಡದಿಂದ ಶಾಸಕ ವೆಂಕಟರಮಣಪ್ಪ ಪುತ್ರ ವೆಂಕಟೇಶ್, ಚಿಕ್ಕನಾಯಕನಹಳ್ಳಿಯಿಂದ ಕಿರಣ್‌ಕುಮಾರ್, ತಿಪಟೂರಿನಿಂದ ಕೆ.ಷಡಾಕ್ಷರಿ, ಕುಣಿಗಲ್‌ನಿಂದ ಶಾಸಕ ಡಾ.ರಂಗನಾಥ್, ತುರುವೇಕೆರೆ ಕ್ಷೇತ್ರದಿಂದ ಕಾಂತರಾಜು ಅವರಿಗೆ ಟಿಕೆಟ್ ನೀಡಲಾಗಿದೆ.
ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ ಕ್ಷೇತ್ರಕ್ಕೆ ಹೆಸರು ಪ್ರಕಟಿಸಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.