ಬುಧವಾರ, ಅಕ್ಟೋಬರ್ 21, 2020
22 °C

ತುಮಕೂರು: ಕರ್ನಾಟಕ ಬಂದ್ ಪ್ರಯುಕ್ತ ಬೈಕ್ ರ್ಯಾಲಿ ಆರಂಭ, ಪೊಲೀಸರಿಂದ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕರ್ನಾಟಕ ಬಂದ್ ಪ್ರಯುಕ್ತ ನಗರದ ಟೌನ್‌ಹಾಲ್‌ನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಈಗ ಬೈಕ್ ರ್ಯಾಲಿಗೆ ಮುಂದಾಗಿದ್ದಾರೆ. 

ನಗರದಲ್ಲಿ ಅಂಗಡಿಗಳು ಬಂದ್ ಆಗಿವೆ. ಬೈಕ್ ರ್ಯಾಲಿಗೆ ಪೊಲೀಸರು ತಡೆ ನೀಡಿದ್ದು, ಪೊಲೀಸರು ಮತ್ತು ಪ್ರತಿಭಟನ‌ಕಾರರ ನಡುವೆ ಜಟಾಪಟಿ ನಡೆಯುತ್ತಿದೆ.

ಬೈಕ್ ರ್ಯಾಲಿಗೆ ಅನುಮತಿ ನೀಡದ ಕಾರಣ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಜಟಾಪಟಿ ಹೆಚ್ಚಿದೆ. ಈ ವೇಳೆ ಪ್ರತಿಭಟನ ನಡೆಸುತ್ತಿದ್ದವರನ್ನು ಬಂಧಿಸಲಾಯಿತು. 

ಪೊಲೀಸರು ಮತ್ತು ಸರ್ಕಾರದ ವಿರುದ್ಧ ಪ್ರತಿಭಟನಕಾರರು ಘೋಷಣೆ ಕೂಗಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.