ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾದಲ್ಲಿ ಶಾಂತಿಯುತ ಮತದಾನ; ಮುಂಜಾನೆ ಮಂದ, ಸಂಜೆ ಸುಗಮ

Last Updated 4 ನವೆಂಬರ್ 2020, 3:36 IST
ಅಕ್ಷರ ಗಾತ್ರ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮಂಗಳವಾರ ಶಾಂತಿಯುತವಾಗಿ ಮುಗಿದಿದ್ದು, ಒಟ್ಟಾರೆ ಶೇ... ರಷ್ಟು ಮತದಾನವಾಗಿದೆ.

ಮತದಾನ ಆರಂಭವಾದ ಕೆಲ ಹೊತ್ತಿನಲ್ಲೇ ಒಂದೆರಡು ಕಡೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಕೈಕೊಟ್ಟವು. ತಕ್ಷಣ ಚುನಾವಣಾ ಸಿಬ್ಬಂದಿ ತಾಂತ್ರಿಕ ದೋಷ ಸರಿಪಡಿಸಿ ಮತದಾನ ಸುಗಮವಾಗಿ ನಡೆಯುವಂತೆ ನೋಡಿಕೊಂಡರು.

ಬೆಳಿಗ್ಗೆ ಮಂದಗತಿಯಲ್ಲಿ ಆರಂಭವಾದ ಮತದಾನ, 11 ಗಂಟೆಯ ನಂತರ ಸ್ವಲ್ಪ ಮಟ್ಟಿಗೆ ಚುರುಕಾಯಿತು. ಮಧ್ಯಾಹ್ನದ ವೇಳೆಗೆ ಜನರು ಮತಗಟ್ಟೆಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರಿಂದ ಬಿರುಸು ಪಡೆದುಕೊಂಡಿತು.

ವಾಹನ ವ್ಯವಸ್ಥೆ: ಬೆಂಗಳೂರಿನಲ್ಲಿ ನೆಲೆಸಿರುವ ಶಿರಾ ತಾಲ್ಲೂಕಿನ ಮತದಾರರಿಗೆ ಅಭ್ಯರ್ಥಿಗಳ ಪರವಾಗಿ ವಾಹನ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರು ವಾಹನ ಸೌಲಭ್ಯ ಕಲ್ಪಿಸಿದ್ದರು. ನೂರಾರು ಸಂಖ್ಯೆಯಲ್ಲಿ ಬಂದಿದ್ದವರು ಮತದಾನ ಮಾಡಿದ್ದು ವಿಶೇಷವಾಗಿತ್ತು.

ಶಿರಾ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮಾದರಿ ಮತಗಟ್ಟೆ ತೆರೆಯಲಾಗಿತ್ತು. ರೆಡ್ ಕಾರ್ಪೆಟ್ ಮತದಾರರನ್ನು ಸ್ವಾಗತಿಸಿತು. ವೋಟ್ ಮಾಡಲು ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಮತಗಟ್ಟೆಯ ಹೊರಭಾಗದಲ್ಲಿ ಸೆಲ್ಫಿಗೆ ಅವಕಾಶ ನೀಡಲಾಗಿತ್ತು.

ಕೊನೆಯಲ್ಲಿ ಸೋಂಕಿತರಿಗೆ ಅವಕಾಶ

ಮತದಾನ ಮುಕ್ತಾಯಕ್ಕೂ ಮುನ್ನ ಒಂದು ಗಂಟೆ ಕಾಲ ಕೊರೊನಾ ಸೋಂಕಿತರಿಗೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಮತಗಟ್ಟೆಗಳಲ್ಲಿ ಸ್ಯಾನಿಟೈಸ್ ಮಾಡಿ, ಮತದಾರರಿಗೆ ಗ್ಲೌಸ್ ವಿತರಿಸಲಾಯಿತು.

ಮತಗಟ್ಟೆ ಸಿಬ್ಬಂದಿ ಪಿಪಿ ಕಿಟ್ ಧರಿಸಿ ಕಾರ್ಯ ನಿರ್ವಹಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ ನೆರವು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT