ಶನಿವಾರ, ಜುಲೈ 31, 2021
28 °C

ತುಮಕೂರು: ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಕೆಡಿಪಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಡಿಪಿ ಸಭೆಯಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ 2019-20ನೇ ಸಾಲಿನ 4ನೇ ತ್ರೈಮಾಸಿಕ ಕೆಡಿಪಿ ಸಭೆ ಆರಂಭ.

ಆರಂಭದಲ್ಲಿಯೇ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಯೋಚನೆಗಳ ಕುರಿತು ಚರ್ಚೆ ನಡೆಯಿತು.

ಎಷ್ಟು ಅರ್ಜಿಗಳು ಬಂದಿವೆ. ಎಷ್ಟು ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಎಷ್ಟು ಅರ್ಜಿಗಳು ತಿರಸ್ಕೃತವಾಗಿದೆ ಎನ್ನುವ ‌ಮಾಹಿತಿ‌ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಬಗರ್ ಹುಕುಂ ಸಾಗುವಳಿ ಹಕ್ಕುಪತ್ರ ನೀಡುವ ವಿಚಾರದಲ್ಲಿ ಬೇಗ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಧುಸ್ವಾಮಿ ಸೂಚಿಸಿದರು.

ಶಿರಾ, ಪಾವಗಡದಲ್ಲಿ ಕಂದಾಯ ಅದಾಲತ್ ನಡೆದಿಲ್ಲ. ಏಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು‌ ಉಳಿದ ತಾಲ್ಲೂಕಿನಲ್ಲಿ ಎಷ್ಟು ಅದಾಲತ್‌ಗಳು ನಡೆದಿವೆ ಎನ್ನುವ ಬಗ್ಗೆ ಮಾಹಿತಿ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು