ಸೋಮವಾರ, ಡಿಸೆಂಬರ್ 5, 2022
20 °C

ಈ ಬಾರಿ ಸ್ಪರ್ಧಿಸಲ್ಲ: ಮಧುಗಿರಿ ಜೆಡಿಎಸ್ ಶಾಸಕ ವೀರಭದ್ರಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯಲು ಮಧುಗಿರಿ ಕ್ಷೇತ್ರದ ಜೆಡಿಎಸ್ ಶಾಸಕ  ಎಂ.ವಿ.ವೀರಭದ್ರಯ್ಯ ನಿರ್ಧರಿಸಿದ್ದಾರೆ.

ಅನಾರೋಗ್ಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕುಟುಂಬದವರ ಒತ್ತಡದಿಂದಾಗಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಧುಗಿರಿ ತಾಲ್ಲೂಕಿನ ಸಿದ್ದಾಪುರದ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ಗುರುವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಮಯದಲ್ಲಿ ‘ಮುಂದಿನ ಚುನಾವಣೆಯಲ್ಲೂ ನೀವೇ ಸ್ಪರ್ಧಿಸಬೇಕು’ ಎಂದು ಕಾರ್ಯಕರ್ತರು ಒತ್ತಡ ಹಾಕಿದಾಗ ಈ ರೀತಿ ತಿಳಿಸಿದರು.

ಅನಾರೋಗ್ಯದಿಂದಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ಆದರೆ ಕೆಲವರು ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಸಂಘಟಿಸುತ್ತಿಲ್ಲ. ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಆರೋಪಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕುಮಾರಸ್ವಾಮಿ ಬಳಿ ನನ್ನ ವಿರುದ್ಧ ದೂರು ಹೇಳಿದ್ದಾರೆ. ನಾನು ಯಾರಿಂದಲೂ ಹೇಳಿಸಿಕೊಂಡು ಪಕ್ಷ ಸಂಘಟನೆ ಮಾಡುವ ಅವಶ್ಯಕತೆ ಇಲ್ಲ. ರಾಜಣ್ಣ ಸಹ ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡಿಲ್ಲ. ಎಚ್.ಡಿ.ದೇವೇಗೌಡರ ಸಾವಿನ ಕುರಿತು ಮಾತನಾಡಿದಾಗ ರಾಜಣ್ಣ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು