ಬೆಂಗಳೂರು: ರಾಜ್ಯದ ಹಾಸನ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳ ವಿವಿಧೆಡೆ ಶುಕ್ರವಾರ ರಾತ್ರಿ ಹಾಗೂ ಶನಿವಾರ ಉತ್ತಮ ಮಳೆಯಾಗಿದೆ.

ಹಾಸನ ಜಿಲ್ಲೆಯ ಅರಸೀಕೆರೆ, ಜಾವಗಲ್ ಹಾಗೂ ಸುತ್ತಮುತ್ತ ಶುಕ್ರವಾರ ಮಧ್ಯರಾತ್ರಿ ಬಿರುಗಾಳಿ, ಜೋರು ಮಳೆಯಿಂದಾಗಿ ತೆಂಗು, ಬಾಳೆ, ಅಡಿಕೆ ಬೆಳೆ ನೆಲಕಚ್ಚಿವೆ.

ಜಾವಗಲ್ನಲ್ಲಿ ಭಾರಿ ಮಳೆ– ಗಾಳಿಗೆ 15ಕ್ಕೂ ಹೆಚ್ಚು ವಿದ್ಯುತ್ ಕಂಬ ಉರುಳಿದರೆ, ಅರಸೀಕೆರೆ ತಾಲ್ಲೂಕಿನ ಸಲುಪರಹಳ್ಳಿ, ಉಂಡಿಗನಾಳುವಿನಲ್ಲಿ ಅಡಿಕೆ ಬೆಳೆಗೆ ಹಾನಿಯಾಗಿದೆ. ಮುದ್ದನಹಳ್ಳಿಯಲ್ಲಿ 200ಕ್ಕೂ ಹೆಚ್ಚು ಬಾಳೆಗಿಡಗಳಿಗೆ ಹಾನಿಯಾಗಿದೆ.

ಮೈಸೂರು ಜಿಲ್ಲೆಯಾದ್ಯಂತ ಗುಡುಗು–ಸಿಡಿಲು ಸಹಿತ ಮಳೆ ಯಾಗಿದ್ದು, ನಂಜನಗೂಡು ತಾಲ್ಲೂಕು ದಾಸನೂರಿನಲ್ಲಿ ಗರಿಷ್ಠ ಅಂದರೆ 5.2 ಸೆಂ.ಮೀ. ಮಳೆ ಯಾಗಿದೆ. ಎಚ್.ಡಿ. ಕೋಟೆ ತಾಲ್ಲೂಕು ಹಂಪಾಪುರ ಹೋಬಳಿಯ ಎಂ.ಕನ್ನೇನಹಳ್ಳಿಯಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿತು.

ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ಮಧ್ಯರಾತ್ರಿ ಬಿರುಗಾಳಿ ಸಹಿತ ಮಳೆ ಅಬ್ಬರಿಸಿದೆ. ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಕಂಬ, ಮರ ಉರುಳಿವೆ. ಕೆಲ ಮನೆಗಳ ಚಾವಣಿ ಶೀಟ್ಗಳು ಹಾರಿಹೋಗಿವೆ. ಶನಿವಾರ ಇಡೀ ದಿನ ನಗರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ 70ಕ್ಕೂ ಹೆಚ್ಚು ಕಂಬಗಳು ಬಿದ್ದಿವೆ. ಹೂವಿನ ತೋಟಗಳು ಬಿರುಗಾಳಿಗೆ ಸಿಲುಕಿ ಹಾಳಾಗಿವೆ. ಕೆಜಿಎಫ್ ತಾಲ್ಲೂಕಿನಲ್ಲಿ ಬೆಳೆ ಹಾನಿಯಾಗಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನಲ್ಲಿ ಗಾಳಿ ಸಹಿತ ಮಳೆಗೆ ನೂರಾರು ತೆಂಗು, ಅಡಿಕೆ, ಬಾಳೆ, ದಾಳಿಂಬೆ ಗಿಡ, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹುಳಿಯಾರು ಹೋಬಳಿ ಬೋರನ ಕಣಿವೆ ಪ್ರೌಢಶಾಲೆ ಅಡುಗೆ ಮನೆ ಚಾವಣಿ ಹಾರಿಹೋಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಂಗಳೂರು– ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-470953596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.