ಭಾನುವಾರ, ಸೆಪ್ಟೆಂಬರ್ 26, 2021
21 °C

ನಾಯಕತ್ವ ಬದಲಾವಣೆಗೆ ಬಿಜೆಪಿಯಲ್ಲಿ ಒತ್ತಡ: ಸ್ವಾಮೀಜಿ ಭೇಟಿಯಾದ ಸಿಎಂ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ವಲಯದಲ್ಲಿ ಒತ್ತಡ ಹೆಚ್ಚುತ್ತಿರುವ ಸಮಯದಲ್ಲೇ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿ ಗೌಪ್ಯ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನೆ ನಡೆಸಿದ ನಂತರ ನೇರವಾಗಿ ಒಬ್ಬರೇ ಮಠಕ್ಕೆ ತೆರಳಿದರು. ತೆರಳುವ ಮುನ್ನ ಜತೆಯಲ್ಲಿ ಇದ್ದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನೂ ಕರೆದುಕೊಂಡು ಹೋಗಲಿಲ್ಲ. ಸ್ವಾಮೀಜಿ ಜೊತೆ ಸುಮಾರು 20 ನಿಮಿಷ ಚರ್ಚೆ ನಡೆಯಿತು.

ನಿಗದಿಯಂತೆ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಠಕ್ಕೆ ಭೇಟಿ ನೀಡಬೇಕಿತ್ತು. ಸಭೆ ನಡೆಯುವಾಗ ಮುಖ್ಯಮಂತ್ರಿ ಮಠಕ್ಕೆ ಹೋಗುವುದಿಲ್ಲ. ನೇರ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮಾಧ್ಯಮದವರಿಗೆ ತಿಳಿಸಲಾಯಿತು.

ಮಾಧ್ಯಮದವರು ಮಠದ ಬಳಿ ಬರುವುದನ್ನು ತಪ್ಪಿಸಿ ಯಡಿಯೂರಪ್ಪ ಅವರೊಬ್ಬರೇ ಸ್ವಾಮೀಜಿಯನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಭೇಟಿಯ ಬಳಿಕ ಬೆಂಗಳೂರಿಗೆ ಹಿಂದಿರುಗಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು