ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳ ಪರರ ನಂಬ; ಸಿದ್ದರಾಮಯ್ಯ ವಿರುದ್ಧ ಡಿಸಿಎಂ ಸವದಿ ವಾಗ್ದಾಳಿ

Last Updated 23 ಅಕ್ಟೋಬರ್ 2020, 6:14 IST
ಅಕ್ಷರ ಗಾತ್ರ

ತುಮಕೂರು: ಕಾಂಗ್ರೆಸ್‌ನಲ್ಲಿಯೇ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳು ಇವೆ. ಅವರಲ್ಲಿಯೇ ಒಗ್ಗಟ್ಟು ಇಲ್ಲ. ಹೀಗುರುವಾಗ ಸಿದ್ದರಾಮಯ್ಯ ಬಿಜೆಪಿ ಟೀಕಿಸುತ್ತಾರೆ. ಕಳ್ಳ ಪರರ ನಂಬ ಎನ್ನುವ ಸ್ಥಿತಿ ಅವರದ್ದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿಯೇ ಹೊಂದಾಣಿಕೆ ಕೊರತೆ ಇದೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯ ಅವರ ವೈಯಕ್ತಿಕ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದರು.

ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಯೇ ಸಾಧಿಸುತ್ತದೆ. ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಪರಿಷತ್ ನಲ್ಲಿ ಬಲ ಹೆಚ್ಚಿಸಿಕೊಳ್ಳಲಿದೆ ಎಂದರು.

ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಲ್ಲಿ ಬಸ್ ಗಳಲ್ಲಿ ನಿತ್ಯ ಎರಡು ಕೋಟಿ ಜನರು ಸಂಚರಿಸುತ್ತಿದ್ದರು. ಆದರೆ ಈಗ ಶೇ 30 ರಷ್ಟು ಜನರು ಸಂಚರಿಸುತ್ತಿದ್ದಾರೆ. ನೌಕರರಿಗೆ ವೇತನಕೊಡಲು ಹಣ ಇಲ್ಲದ ಸ್ಥಿತಿ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT