ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ನಾಮಪತ್ರ ಸಲ್ಲಿಕೆ

Last Updated 14 ಅಕ್ಟೋಬರ್ 2020, 6:53 IST
ಅಕ್ಷರ ಗಾತ್ರ

ತುಮಕೂರು: ಶಿರಾ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯ ರಾಜ್ ಇದ್ದರು.

ಇದೇ 16 ರಂದು ಅವರು ಮತ್ತೊಮ್ಮೆ ನಾಮಪತ್ರ ಸಲ್ಲಿಸುವರು.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಶ್ ಗೌಡ, ಶಿರಾ ಜನರು ಈಗಾಗಲೇ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ನೋಡಿದ್ದಾರೆ. ಬಿಜೆಪಿಗೆ ಅವಕಾಶ ನೀಡುವ ಭರವಸೆ ಇದೆ ಎಂದರು.

ಶಿರಾದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಟಿಕೆಟ್ ಆಕಾಂಕ್ಷಿಗಳಾಗಿದ್ದ ಎಸ್‌.ಆರ್.ಗೌಡ, ಬಿ.ಕೆ.ಮಂಜುನಾಥ್ ಮತ್ತು ನನ್ನ ನಡುವೆ ಭಿನ್ನಾಭಿಪ್ರಾಯ ಇಲ್ಲ ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಶಿರಾ ತಾಲ್ಲೂಕಿನ ಜನರ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ಆಶೀರ್ವಾದ ರಾಜೇಶ್ ಗೌಡ ಅವರ ಮೇಲಿದೆ. ದೇಶದ ಶೇ 85 ರಷ್ಟು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇದೆ. ದೇಶದ ಜನರು ಎಲ್ಲೆಡೆ ಬಿಜೆಪಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದರು.

ಮುಖಂಡ ಎಸ್.ಆರ್.ಗೌಡ ಮಾತನಾಡಿ, ವರಿಷ್ಠರು ನಮಗೆ ಬೇರೆ ರೀತಿಯಲ್ಲಿ ಅವಕಾಶಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ. ನಮ್ಮ ನಡುವೆ ಅಸಮಾಧಾನ ಇಲ್ಲ. ಪಕ್ಷದ ಅಧಿಕೃತ ಅಭ್ಯರ್ಥಿ ರಾಜೇಶ್ ಗೌಡ ಪರ ಕೆಲಸ ಮಾಡುತ್ತೇವೆ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಸುರೇಶ್ ಗೌಡ, ಸಂಸದ ಎ.ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್ ‌ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT