ತುಮಕೂರು: ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದ ಪರಿಶಿಷ್ಟ ಸಮುದಾಯಕ್ಕೆ ಸೇರಿದ ವಿನೋದ್ ಅವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಕಂದಾಯ ಸಚಿವ ಆರ್.ಅಶೋಕ್ ಉಪಹಾರ ಸೇವಿಸಿದರು.
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ನಿಮಿತ್ತ ಮಾಯಸಂದ್ರದಲ್ಲಿ ವಾಸ್ತವ್ಯ ಹೂಡಿರುವ ಸಚಿವರು ಬೆಳಿಗ್ಗೆ ವಿನೋದ್ ಅವರ ಮನೆಗೆ ಭೇಟಿ ನೀಡಿ ಅಕ್ಕಿರೊಟ್ಟಿ, ಹುಚ್ಚೆಳ್ಳು ಚಟ್ನಿ, ಕೇಸರಿಬಾತ್, ಉಪ್ಪಿಟ್ಟು, ಚಿತ್ರಾನ್ನ ಸೇವಿಸಿದರು.
ಮಾಯಸಂದ್ರಕ್ಕೆ ಘೋಷಿಸಲಾದ ₹1 ಕೋಟಿ ಅನುದಾನದ ಪೈಕಿ ₹25 ಲಕ್ಷ ಗ್ರಾಮದ ದಲಿತ ಕೇರಿಯ ಸಮಗ್ರ ಸಿ.ಸಿ.ರಸ್ತೆ ನಿರ್ಮಾಣಕ್ಕೆ ನೀಡಲಾಗುವುದು ಎಂದರು.
ಸಾರ್ವಜನಿಕರಿಂದ ಅಹವಾಲು ಆಲಿಸಿ, ಅರ್ಜಿಗಳನ್ನು ಪರಿಶೀಲಿಸಿದರು. ತ್ವರಿತವಾಗಿ ಇತ್ಯರ್ಥಗೊಳಿಸುವಂತೆ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ.ಅಜಯ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.