ಮಧುಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಸೋಮವಾರ ಥಳಿಸಿದ್ದಾರೆ.
ಪ್ರತಿನಿತ್ಯ ಮೈ ಮುಟ್ಟಿ ಅನುಚಿತವಾಗಿ ವರ್ತಿಸುತ್ತಿದ್ದರು ಎಂದು ವಿದ್ಯಾರ್ಥಿನಿಯರು ಪೋಷಕರಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಶಾಲೆ ಆರಂಭಕ್ಕೂ ಮುನ್ನವೇ ಶಿಕ್ಷಕರನ್ನು ತಡೆದು ಪೋಷಕರು ವಿಚಾರಿಸಿದರು. ಬಳಿಕ ಆತನಿಗೆ ಥಳಿಸಿದ್ದಾರೆ. ಬಳಿಕ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿ ಪೊಲೀಸರಿಗೆ ಒಪ್ಪಿಸಿದರು.
ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು, ಬಡವನಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿನಿಯರೊಂದಿಗೆ ಈ ಬಗ್ಗೆ ವಿಚಾರಣೆ ನಡೆಸಿದಾಗ ಶಿಕ್ಷಕನ ಕೃತ್ಯ ಬಯಲಿಗೆ ಬಂದಿದೆ.
ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಈ ಬಗ್ಗೆ ದೂರು ದಾಖಲಾಗಿದೆ. ಸಹ ಶಿಕ್ಷಕನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.