ಸೋಮವಾರ, ಜುಲೈ 26, 2021
27 °C

‘ಗ್ರಾಮ ಪಂಚಾಯಿತಿ ಸಭಾಂಗಣ ನಿರ್ಮಾಣಕ್ಕೆ ಅನುದಾನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಗ್ರಾಮ ಪಂಚಾಯಿತಿ ಕಾರ್ಯಾಲಯಗಳು ಸಾರ್ವಜನಿಕ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಬೇಕು ಎಂದು  ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಕವಣದಾಲ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಸಭಾಂಗಣ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಗ್ರಾಮ ಠಾಣೆ ಸ್ಥಳವನ್ನು ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಬೇಕು. ಗ್ರಾಮದ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು.

ತಾಲ್ಲೂಕಿನಲ್ಲಿ ಮೂರು ಗ್ರಾಮಗಳಲ್ಲಿ ವಿದ್ಯುತ್ ಸ್ಥಾವರ ಘಟಕಗಳು ಮಂಜೂರಾಗಿದ್ದು, ಸ್ಥಳ ಪರಿಶೀಲಿಸುವಂತೆ ಅಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ಧಗಂಗಮ್ಮ ನಾಗರಾಜು, ಉಪಾಧ್ಯಕ್ಷೆ ಅನುಸೂಯಾ, ಪಿಡಿಒ ಅಲ್ಮಾಸ್ ಮೌಲಾಜಾನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಿನರಸಪ್ಪ, ಸದಸ್ಯ ದೊಡ್ಡಯ್ಯ, ನಿರ್ಮಿತಿ ಕೇಂದ್ರದ ಜೆ.ಇ.ಶಾಂತರಾಜು, ನಾರಾಯಣ್, ಆರ್.ಐ.ಚನ್ನವೀರಯ್ಯ, ಮುಖಂಡರಾದ ಕೃಷ್ಣಪ್ಪ, ಸಿಡದರಗಲ್ಲು ಶ್ರೀನಿವಾಸ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.