ಭಾನುವಾರ, ಸೆಪ್ಟೆಂಬರ್ 19, 2021
24 °C

ತುಮಕೂರು: ಅಧಿಕಾರಿಗಳಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ತರಾಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತರಾಟೆಗೆ ತೆಗೆದುಕೊಂಡರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸ್ಟೆಲ್ ಕಟ್ಟಡ, ಸಮುದಾಯ ಭವನ ನಿರ್ಮಾಣ, ಸ್ಮಶಾನಗಳಿಗೆ ತಂತಿಬೇಲಿ ನಿರ್ಮಿಸಲು ತಡ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರ ಇರುವುದು ಮೋಜು ಮಾಡಲು ಅಲ್ಲ, ಇದು ಕೆಲಸ ಮಾಡುವ ರೀತಿಯೆ? ಕುರ್ಚಿ ಬಿಟ್ಟು ಎದ್ದು ಬಂದರೆ ಏನಾಗುತ್ತದೆ ಗೊತ್ತಾ ಎಂದು ಗುಡುಗಿದರು.

ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರೇಮ ಅವರನ್ನು ಮುಕ್ಕಾಲು ಗಂಟೆ ಸಭೆಯಲ್ಲಿ ನಿಲ್ಲಿಸಿಕೊಂಡು ತರಾಟೆಗೆ ತೆಗೆದುಕೊಂಡರು.

ಮದಲೂರು ಕೆರೆಗೆ ನೀರು ಬಿಟ್ಟರೆ ಜೈಲು
ಹಾಸನದ ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ಭಾನುವಾರದಿಂದ ನೀರು ಬಿಡಲಾಗುತ್ತದೆ. ಶಿರಾ, ಕಳ್ಳಂಬೆಳ್ಳ ಕೆರೆಗೆ ಮಾತ್ರ ನೀರು ಹರಿಸಬೇಕು. ಮದಲೂರು ಕೆರೆಗೆ ನೀರು ಹರಿಸಿದರೆ ಜೈಲಿಗೆ ಕಳುಹಿಸಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಸಿದರು.

ಶಿರಾ ಉಪಚುನಾವಣೆ ಸಮಯದಲ್ಲಿ ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.