ಸೋಮವಾರ, ಜೂನ್ 27, 2022
21 °C

ಮಧುಗಿರಿ: ಕೊರೊನಾ ಸಂಕಷ್ಟದಲ್ಲಿ ಕೈಹಿಡಿದ ‘ಅನ್ನಭಾಗ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದ ಮಾಲಿ ಮರಿಯಪ್ಪ ರಂಗಮಂದಿರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣದ ನೇರ ಪ್ರಸಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಿದ್ದರಾಮಯ್ಯ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆ ಇಲ್ಲದಿದ್ದರೆ ಕೊರೊನಾ ಸಂಕಷ್ಟದ ಸಮಯದಲ್ಲಿ ಜನರು ಒಪ್ಪೊತ್ತಿನ ಊಟಕ್ಕೂ
ಪರಿತಪಿಸಬೇಕಾಗಿತ್ತು. ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಈ ಯೋಜನೆಯನ್ನು ಜಾರಿಗೊಳಿಸಿದ್ದಾರೆ ಎಂದರು.

ಕೆಪಿಸಿಸಿ ವೀಕ್ಷಕ ಶ್ರೀನಾಥ್ ಮಾತನಾಡಿದರು. ಜಿಲ್ಲಾ ವೀಕ್ಷಕ ವಾಲೆ ಚಂದ್ರಯ್ಯ, ರಾಜ್ಯ ಸಹಕಾರಿ ಮಹಾಮಂಡಳ ಅಧ್ಯಕ್ಷ ಎನ್.ಗಂಗಣ್ಣ, ಜಿ.ಪಂ ಮಾಜಿ ಸದಸ್ಯ ಎಸ್.ಡಿ.ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಸೊಸೈಟಿ ರಾಮಣ್ಣ, ಪುರಸಭೆ ಮಾಜಿ ಅಧ್ಯಕ್ಷರಾದ
ಆರ್.ಸಿ.ವಿಜಯ ಕುಮಾರ್ ಜೈನ್, ಕೆ.ಪ್ರಕಾಶ್, ಎಂ.ವಿ.ಗೋವಿಂದರಾಜು, ಸದಸ್ಯರಾದ ಎಂ.ಎಸ್.ಚಂದ್ರಶೇಖರ್, ತಿಮ್ಮರಾಜು, ಮಂಜುನಾಥ ಆಚಾರ್, ಲಾಲಾಪೇಟೆ ಮಂಜುನಾಥ್, ಸುಜಾತಾ, ಗಾಯತ್ರಿ ದೇವಿ, ರಾಧಿಕಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು