ಕೊಡಿಗೇನಹಳ್ಳಿ: ಪುರವರ ಹೋಬಳಿ ಕೋಡ್ಲಾಪುರದಲ್ಲಿ ಮಾತಂಗಿ ಕಲಾ ಮತ್ತು ಸಾಂಸ್ಕೃತಿಕ ಬಳಗದ ಯುವಕರು ಅಂಬೇಡ್ಕರ್ ಜಯಂತಿ ಆಚರಿಸಿದರು.

ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರದ ಫಲಕ ಅಳವಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೀಲಿ ಬಾವುಟಗಳನ್ನು ಹಿಡಿದು ಜೈಕಾರ ಹಾಕುತ್ತ ತಮಟೆ ವಾದ್ಯಗಳನ್ನು ಬಾರಿಸಿದರು.

ಮಾತಂಗಿ ಸಂಘದ ಅಧ್ಯಕ್ಷ ಕೆ.ಎಸ್. ವಿಜಯ್ ಕುಮಾರ್ ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನತೆಯಿಂದ ಬಾಳುತ್ತಿದ್ದೇವೆ. ಅವರ ಆಶಯದಂತೆ ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಸಂಘದ ಉಪಾಧ್ಯಕ್ಷ ನಾರಾಯಣಪ್ಪ, ನಿರ್ದೇಶಕರಾದ ಪಾರ್ವತಮ್ಮ, ವೆಂಕಟ್, ನಾರಾಯಣ್, ತಾ.ಪಂ.ಮಾಜಿ ಸದಸ್ಯ ಶ್ರೀನಿವಾಸ್, ಗಣೇಶಪ್ಪ, ಎಂ.ಎನ್, ಶಾಂತವೇಣಿ ಮಾತಂಗಿ ಕಲಾ ಮತ್ತು ಸಾಂಸ್ಕೃತಿಕ ಬಳಗದ ಮುಖ್ಯಸ್ಥರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-17-399546555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.