ಕೊರಟಗೆರೆ: ಗ್ರಾಮೀಣ ಭಾಗದ ಬಡ, ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರದ ಆಶ್ರಯ ಯೋಜನೆಯ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಅಶ್ವಿಜ ಸೂಚಿಸಿದರು.

ತಾಲ್ಲೂಕಿನ ನೀಲಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಗೆ ಮಂಜೂರಾದ ಸ್ಥಳ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದರು. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ, ತಾಂತ್ರಿಕ ಅಡೆತಡೆ ಆಗದಂತೆ ಕ್ರಮ ವಹಿಸಬೇಕು ಎಂದು ತಾಕೀತು ಮಾಡಿದರು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವಾ ಸಿ.ಅನಂತರಾಮು, ತಾ.ಪಂ ಸಹಾಯಕ ನಿರ್ದೇಶಕ ಎಂ.ಬಿ.ಗುರುಮೂರ್ತಿ, ವಸತಿ ಶಾಖೆ ನೋಡಲ್ಅಧಿಕಾರಿ ವೈ.ಆರ್. ಶಿವಪ್ರಸನ್ನ, ನಗರ ಯೋಜನಾ ಪ್ರಾಧಿಕಾರದ ಅಧಿಕಾರಿ ಧರಣೇಶ್, ಉಪ ತಹಶೀಲ್ದಾರ್ ಮಧುಚಂದ್ರ, ಪಿಡಿಒ ಎನ್.ಮಂಜುಳಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.