ಕೊರಟಗೆರೆ: ಕ್ಷೇತ್ರದ ಶಾಸಕ ಜಿ. ಪರಮೇಶ್ವರ ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಮುಖ್ಯ ಬಸ್ ನಿಲ್ದಾಣ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಕೆ.ಆರ್. ಓಬಳರಾಜು ಮಾತನಾಡಿ, ‘ಪರಮೇಶ್ವರ ಎರಡನೇ ಬಾರಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಕ್ಷೇತ್ರದ ಜನರಿಗೆ ಸಂತಸ ತಂದಿದೆ. ಅವರ ಸೇವೆ ಮತ್ತು ಅನುಭವ ಪರಿಗಣಿಸಿದರೆ ಅವರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಹೈಕಮಾಂಡ್ ನಿರ್ಧಾರಕ್ಕೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬದ್ಧರಾಗಿದ್ದೇವೆ’ ಎಂದರು.

ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎಲ್.ರಾಜಣ್ಣ ಮಾತನಾಡಿ, ‘ಜಿ. ಪರಮೇಶ್ವರ ಉಪಮುಖ್ಯಮಂತ್ರಿಯಾಗಿರುವುದನ್ನು ಕೊರಟಗೆರೆ ಕ್ಷೇತ್ರ, ತುಮಕೂರು ಜಿಲ್ಲೆ ಹಾಗೂ ರಾಜ್ಯದಾದ್ಯಂತ ಇರುವ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಜ್ಜನ ರಾಜಕಾರಣಿಯಾಗಿರುವ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಬೇಕು ಎಂಬುದು ನಮ್ಮೆಲ್ಲರ ಆಶಯ’ ಎಂದು ಹೇಳಿದರು.

ಸ್ಥಳೀಯರಾದ ಕೆ.ವಿ. ಮಂಜುನಾಥ್, ನಾಗಭೂಷಣ್, ಮಹೇಶ್, ಕೆ.ಬಿ. ಲೋಕೇಶ್, ಕೆ.ವಿ. ಪುರುಷೋತ್ತಮ್, ಕೆ.ಎಂ. ಸುರೇಶ್, ಕೆ.ಎಲ್. ಆನಂದ್, ವಿಶ್ವನಾಥ್, ಆನಂದ್, ದೀಪಕ್, ರಂಗನಾಥ್, ಅಶ್ವತ್ಥಪ್ಪ, ಶ್ಯಾಮ್, ಗೋವಿಂದರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-296778453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.